ಕೃಷಿ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಸಂದರ್ಶನ
ವಿಜಯಪುರ, 08 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಪಜಾ ಅಭ್ಯರ್ಥಿಗಳಿಗಾಗಿ ಕೃಷಿ ಮೈಕ್ರೊಬಯೊಲಾಜಿ ಹಾಗೂ ಪ.ಪಂ ಅಭ್ಯರ್ಥಿಗಳಿಗಾಗಿ ಅಗ್ರಿಕಲ್ಚರಲ್ ಎಕಾನಾಮಿಕ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಲಾ ಒಂದು ಹುದ್ದೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನವೆಂಬರ್
ಕೃಷಿ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಸಂದರ್ಶನ


ವಿಜಯಪುರ, 08 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಪಜಾ ಅಭ್ಯರ್ಥಿಗಳಿಗಾಗಿ ಕೃಷಿ ಮೈಕ್ರೊಬಯೊಲಾಜಿ ಹಾಗೂ ಪ.ಪಂ ಅಭ್ಯರ್ಥಿಗಳಿಗಾಗಿ ಅಗ್ರಿಕಲ್ಚರಲ್ ಎಕಾನಾಮಿಕ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಲಾ ಒಂದು ಹುದ್ದೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನವೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ಕೃಷಿ ಮಹಾವಿದ್ಯಾಲಯದ ಡೀನ್ ಅವರ ಕಾರ್ಯಾಲಯದಲ್ಲಿ ಸಂದರ್ಶನ ನಡೆಯಲಿದೆ.

ಅಗತ್ಯ ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಕೃಷಿ ಮಹಾವಿದ್ಯಾಲಯದ ಡೀನ್ ಅವರ ಕಚೇರಿಯನ್ನು ಸಂಪರ್ಕಿಸುವಂತೆ ಮಹಾವಿದ್ಯಾಲಯದ ವಿದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande