
ವಿಜಯಪುರ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಕನಕದಾಸರ ಜಯಂತಿ ಹಿನ್ನಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಇತರರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು. ಈ ವೇಳೆಯಲ್ಲಿ ಕನಕಸಿರಿ ಪ್ರಶಸ್ತಿಗೆ ಆಯ್ಕೆಯಾದ ಡಾ.ನೀಲಪ್ಪ ಮೈಲಾರಪ್ಪ ಅಂಬಲಿಯವರ ಅವರಿಗೆ ಕನಕಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಜಿಲ್ಲಾ ಶಿಕ್ಷಣಾಧಿಕಾರಿ ಎಸ್.ಜಿ.ಮಿರ್ಜಿ ಸಮುದಾಯದ ಮುಖಂಡರಾದ ಬಿ.ಡಿ.ಸಿದ್ದಾಪೂರ, ಎಚ್.ಬಿ.ಗೊರವರ, ಮಳಿಯಪ್ಪ ಗುಳಬಾಳ, ಧರ್ಮಣ್ಣ ಸುಣಗದ, ಸೋಮು ಕೈರವಾಡಗಿ, ಆತ್ಮಾನಂದ ಜಾಲಿಹಾಳ, ಸಿದ್ದು ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande