ಸಮಾನತೆ ಸಾರಿದ ಮಹಾನ ಶ್ರೇಷ್ಠ ಸಂತ ಶ್ರೀ ಕನಕದಾಸರು- ಎನ್ಎಸ್ ಬೋಸರಾಜು
ರಾಯಚೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಜಾತಿ, ಮತ, ಪಂಥ ಎಂದು ಹೊಡೆದಾಡದಿರಿ. ಇರುವುದೊಂದೇ ಮಾನವ ಪಥ ಎಂದು ತಮ್ಮ ಕೀರ್ತನೆಗಳ ಮೂಲಕ ನಾಡಿನಲ್ಲಿ ಶಾಂತಿ, ಸೌಹಾರ್ದತೆ, ಸಮಾನತೆಯ ಸಂದೇಶ ಸಾರಿದ ಮಹಾನ್ ಶ್ರೇಷ್ಠ ಸಂತ ಕನಕದಾಸರು. ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್
ಸಮಾನತೆ ಸಾರಿದ ಮಹಾನ ಶ್ರೇಷ್ಠ ಸಂತ ಶ್ರೀ ಕನಕದಾಸರು- ಎನ್ಎಸ್ ಬೋಸರಾಜು


ಸಮಾನತೆ ಸಾರಿದ ಮಹಾನ ಶ್ರೇಷ್ಠ ಸಂತ ಶ್ರೀ ಕನಕದಾಸರು- ಎನ್ಎಸ್ ಬೋಸರಾಜು


ರಾಯಚೂರು, 08 ನವೆಂಬರ್ (ಹಿ.ಸ.) :

ಆ್ಯಂಕರ್ : ಜಾತಿ, ಮತ, ಪಂಥ ಎಂದು ಹೊಡೆದಾಡದಿರಿ. ಇರುವುದೊಂದೇ ಮಾನವ ಪಥ ಎಂದು ತಮ್ಮ ಕೀರ್ತನೆಗಳ ಮೂಲಕ ನಾಡಿನಲ್ಲಿ ಶಾಂತಿ, ಸೌಹಾರ್ದತೆ, ಸಮಾನತೆಯ ಸಂದೇಶ ಸಾರಿದ ಮಹಾನ್ ಶ್ರೇಷ್ಠ ಸಂತ ಕನಕದಾಸರು. ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ‌ ಪಾಲೊಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಸಂತಕವಿ ಕನಕದಾಸ ಜಯಂತಿ ಪ್ರಯುಕ್ತ ನಗರದ ಗಂಜ್ ವೃತ್ತದ ಬಳಿಯ ಕನಕದಾಸರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ದೇಶದ ಎಲ್ಲ ಶರಣರು, ಸಂತರು, ದಾರ್ಶನಿಕರು ಮತ್ತು ಸಮಾಜ ಸುಧಾರಕರ ತತ್ವ– ಸಿದ್ಧಾಂತ ಒಂದೇಯಾಗಿದೆ. ಸಮಾಜದಲ್ಲಿ ಸರ್ವರೂ ಶಾಂತಿ ಸೌಹಾರ್ಧತೆಯಿಂದ ಸುಖವಾಗಿ ಇರಬೇಕು ಎಂದು ಮಹನೀಯರು ನೀಡಿರುವ ಜೀವನ ಸಂದೇಶಗಳನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಪರಿಪಾಲಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಅದ್ಯಕ್ಷರು, ಶಾಸಕರಾದ ಬಸನಗೌಡ ದದ್ದಲ್, ನಗರ ಶಾಸಕ‌ ಡಾ. ಶಿವರಾಜ‌ ಪಾಟೀಲ್, ಪರಿಷತ್ ಸದಸ್ಯರಾದ ವಸಂತಕುಮಾರ್, ಮಹಾನಗರ ಪಾಲಿಕೆಯ ಮಾಹಾ ಪೌರರಾದ ನರಸಮ್ಮ ಮಾಡಗಿರಿ, ಉಪಾಧ್ಯಕ್ಷ ಜೆ.ಸಾಜೀದ್ ಸಮೀರ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ , ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮ ಹಾಲುಮತ ಸಮಾಜದ ಬಸವಂತಪ್ಪ, ಮುಖಂಡರಾದ ಮೊಹಮ್ಮದ್ ಶಾಲಾಂ ಜಯಣ್ಣ ಕೆ ಶಾಂತಪ್ಪ, ಅಮರೇಗೌಡ ಹಂಚಿನಾಳ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಯುಸೂಫ್ ಖಾನ್ ಸೇರಿ ಮುಖಂಡರು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande