
ಹುಬ್ಬಳ್ಳಿ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ಶನಿವಾರದ ರಾಶಿ ಫಲ
*ಮೇಷ ರಾಶಿ.*
ಕೈಗೊಂಡ ಕೆಲಸಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಪ್ರಮುಖ ವಿಷಯಗಳಲ್ಲಿ ಕುಟುಂಬದ ಸಲಹೆಯನ್ನು ತೆಗೆದುಕೊಂಡು ಮುಂದೆ ಸಾಗುವುದು ಉತ್ತಮ. ಅಗತ್ಯಕ್ಕೆ ಆರ್ಥಿಕ ನೆರವು ದೊರೆಯುತ್ತದೆ. ವ್ಯಾಪಾರದ ಪ್ರಗತಿಗಾಗಿ ಮಾಡುವ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ಉದ್ಯೋಗದಲ್ಲಿ ಬುದ್ಧಿವಂತಿಕೆಯಿಂದ ಸಮಸ್ಯೆಗಳನ್ನು ಪರಿಹರಿಸುತೀರಿ.
*ವೃಷಭ ರಾಶಿ.*
ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಹೊಸ ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಭೋಜನಾ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ದೀರ್ಘಕಾಲದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಮಾನಸಿಕ ಪ್ರಶಾಂತತೆ ದೊರೆಯುತ್ತದೆ.
*ಮಿಥುನ ರಾಶಿ.*
ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಕುಟುಂಬದ ಹಿರಿಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಹೆಚ್ಚಿದ ಸಾಲದ ಒತ್ತಡದಿಂದಾಗಿ ಮಾನಸಿಕ ಸ್ಥಿರತೆ ಇರುವುದಿಲ್ಲ. ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಮನೆಯ ಹೊರಗೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ವ್ಯಾಪಾರಗಳು ಸುಸ್ಥಿರವಾಗಿರುವುದಿಲ್ಲ, ಉದ್ಯೋಗದ ವಾತಾವರಣವು ನಿರುತ್ಸಾಹಗೊಳಿಸುತ್ತದೆ.
*ಕಟಕ ರಾಶಿ.*
ಆತ್ಮೀಯ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ವಿವಾದಗಳಿರುತ್ತವೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯ ಸ್ನೇಹಿತರೊಂದಿಗೆ ಸಣ್ಣ ಸಮಸ್ಯೆಗಳು ಉಂಟಾಗುತ್ತವೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳಿರುತ್ತವೆ.
*ಸಿಂಹ ರಾಶಿ.*
ಮನೆಯ ಹೊರಗೆ ಗೌರವ ಪ್ರತಿಷ್ಟೆ ದೊರೆಯುತ್ತದೆ. ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿ ಸಾಗುತ್ತವೆ. ಹೊಸ ವ್ಯವಹಾರಗಳಿಗೆ ಕುಟುಂಬ ಸದಸ್ಯರಿಂದ ಹೂಡಿಕೆಗಳು ದೊರೆಯತ್ತವೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಉದ್ಯೋಗದ ವಿಷಯದಲ್ಲಿ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಅಪೇಕ್ಷಿತ ಸ್ಥಾನ ಚಲನೆ ಸೂಚನೆಗಳಿರುತ್ತವೆ.
*ಕನ್ಯಾ ರಾಶಿ.*
ಸಮಾಜದ ಪ್ರಮುಖ ವ್ಯಕ್ತಿಗಳ ಪರಿಚಯಗಳು ಲಭದಾಯವಾಗಿರುತ್ತದೆ. ಹಣಕಾಸಿನ ವಿಷಯಗಳಲ್ಲಿ ಅನುಕೂಲತೆ ಉಂಟಾಗುತ್ತದೆ. ಬಂಧು ಮಿತ್ರರಿಂದ ಶುಭ ಸುದ್ದಿ ದೊರೆಯುತ್ತದೆ. ಹೊಸ ಗೃಹೋಪಯೋಗಿ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಮತ್ತು ಲಾಭವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ ದೊರೆಯುತ್ತದೆ.
*ತುಲಾ ರಾಶಿ.*
ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಲ್ಲಿ ವಾಹನ ಅಪಾಯದ ಸೂಚನೆಗಳಿವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಕುಟುಂಬ ಸದಸ್ಯರ ವರ್ತನೆಯಿಂದ ಸ್ವಲ್ಪ ಕಳವಳ ಉಂಟಾಗುತ್ತದೆ . ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಇತರರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ.
*ವೃಶ್ಚಿಕ ರಾಶಿ.*
ಪ್ರಮುಖ ವ್ಯವಹಾರಗಳಲ್ಲಿ ಆತುರದಿಂದ ಗೊಂದಲ ಉಂಟಾಗುತ್ತದೆ. ಸ್ನೇಹಿತರಿಂದ ಅನಿರೀಕ್ಷಿತ ಸಾಲದ ಒತ್ತಡ ಉಂಟಾಗುತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸಣ್ಣ ವಿವಾದಗಳಿರುತ್ತವೆ. ಉದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ.
*ಧನುಸ್ಸು ರಾಶಿ.*
ಅಗತ್ಯಕ್ಕೆ ಕುಟುಂಬ ಸದಸ್ಯರಿಂದ ಸಹಾಯ ದೊರೆಯುತ್ತದೆ. ದೂರ ಪ್ರಯಾಣದಲ್ಲಿ ಹೊಸ ಪರಿಚಯವಾಗುತ್ತದೆ. ಬಂಧು ಮಿತ್ರರಿಂದ ವಿವಾದಗಳ ಬಗ್ಗೆ ಪ್ರಮುಖ ಮಾಹಿತಿ ದೊರೆಯುರುತ್ತದೆ. ವ್ಯಾಪಾರ ಸಮಸ್ಯೆಗಳು ಪರಿಹಾರವಾಗುತ್ತವೆ ಮತ್ತು ಉದ್ಯೋಗಿಗಳಿಗೆ ಶುಭ ಸುದ್ದಿ ದೊರೆಯತ್ತದೆ.
*ಮಕರ ರಾಶಿ.*
ಸಂಗಾತಿಯೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ . ವೃತ್ತಿಪರ ವ್ಯವಹಾರದಲ್ಲಿ ನೀವು ಹೆಚ್ಚಿನ ಕಷ್ಟದಿಂದ ಸ್ವಲ್ಪ ಫಲಿತಾಂಶವನ್ನು ಪಡೆಯುತ್ತೀರಿ. ಸಮಯಕ್ಕೆ ಸರಿಯಾಗಿ ವ್ಯವಹಾರಗಳನ್ನು ಪೂರ್ಣಗೊಳಿಸದ ಕಿರಿಕಿರಿಯು ಹೆಚ್ಚಾಗುತ್ತದೆ. ಆದಾಯದ ಮಾರ್ಗಗಳು ನಿಧಾನವಾಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಸ್ಥಾನ ಚಲನೆ ಸೂಚನೆಗಳಿವೆ. ದೀರ್ಘಾವಧಿಯ ಸಾಲದ ಒತ್ತಡ ಹೆಚ್ಚಾಗುತ್ತದೆ.
*ಕುಂಭ ರಾಶಿ.*
ಹೊಸ ಕಾರ್ಯಕ್ರಮಗಳನ್ನು ಆರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಶುಭ ಕಾರ್ಯಗಳಿಗೆ ಹಾಜರಾಗುತ್ತೀರಿ. ಮನೆಯ ವಾತಾವರಣ ಶಾಂತಿಯುತವಾಗಿರುತ್ತದೆ. ಹೊಸ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಊನಟಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ.
*ಮೀನ ರಾಶಿ.*
ಪ್ರಮುಖ ಕೆಲಸಗಳು ಹೆಚ್ಚಿನ ವೆಚ್ಚ ಮತ್ತು ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆಯಿರುತ್ತದೆ. ಮನೆಯ ಹೊರಗೆ ಕಿರಿಕಿರಿಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ಹೆಚ್ಚು ನಿಧಾನವಾಗಿ ಸಾಗುತ್ತವೆ. ನಿರುದ್ಯೋಗಿಗಳಿಗೆ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ. ಮಕ್ಕಳ ಶಿಕ್ಷಣ ವಿಷಯದ ಮೇಲೆ ಗಮನಹರಿಸುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa