
ದಾವಣಗೆರೆ, 09 ನವೆಂಬರ್ (ಹಿ.ಸ.)
ಆ್ಯಂಕರ್ : ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರದ ತೀರ್ಮಾನದ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಸಮ್ಮುಖದಲ್ಲಿಯೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು.
ಸರಕಾರದ ತೀರ್ಮಾನಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa