
ಭೋಪಾಲ್, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯ ಬಾಂದ್ರಿ–ಮಾಲ್ಥೋನ್ ನಡುವೆ ಮುಂಜಾನೆ ಪೊಲೀಸ್ ವಾಹನ ಮತ್ತು ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೊರೆನಾ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ನಾಲ್ವರು ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಭೋಪಾಲ್‌ನ ಬನ್ಸಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾವನ್ನಪ್ಪಿದವರು ಪ್ರದ್ಯುಮನ್ ದೀಕ್ಷಿತ್, ಅಮನ ಕೌರವ್, ಪರಮಲಾಲ್ ತೋಮರ್ ಮತ್ತು ವಿನೋದ್ ಶರ್ಮಾ ಎಂದು ತಿಳಿದು ಬಂದಿದೆ.
ಅತಿ ವೇಗದಿಂದ ಎದುರು ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ. ಕಂಟೇನರ್ ಚಾಲಕ ಪರಾರಿಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa