
ಕೋಲಾರ, 12 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪಲ್ಸ್ ಪೋಲಿಯೋ ಮುಕ್ತ ಭಾರತವನ್ನಾಗಿಸಲು ಪ್ರತಿಯೊಬ್ಬರೂ ಶ್ರಮ ಪಡೋಣ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ತಿಳಿಸಿದರು.
ಕೋಲಾರ ತಾಲೂಕಿನ ನರಸಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ೨೦೨೫ ೨೬ ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂತರ್ ಇಲಾಖೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಭಾರತ ದೇಶವು ಕಳೆದ ೧೪ ವರ್ಷಗಳಿಂದ ೨೦೧೪ ರಲ್ಲಿ ವಿಶ್ವ ಅರೋಗ್ಯ ಸಂಸ್ಥೆಯು ಭಾರತಕ್ಕೆ ಪೋಲಿಯೋ ಮುಕ್ತ ಭಾರತವೆಂದು ಪ್ರಮಾಣಿಕರಿಸಿದ್ದು, ಶ್ಲಾಘನೀಯವಾದ ವಿಷಯವಾಗಿದೆ ಕೆಲವು ನೆರೆಯ ದೇಶಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡು ಬಂದಿರುವುದರಿಂದ ನಮ್ಮ ದೇಶಕ್ಕೆ ಹರಡುವ ಸಂಭವವಿದೆ ಭಾರತ ದೇಶದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೊದಲ ಭಾಗವಾಗಿ ಡಿಸೆಂಬರ್ ೨೧ ರಂದು ಹಮ್ಮಿಕೊಳ್ಳಲಾಗಿದ್ದು ಯಶಸ್ವಿಗೊಳಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಂಗನವಾಡಿಯ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು, ನರಸಾಪುರ ಗ್ರಾಪಂ ಪಿಡಿಒ ಮುನಿರಾಜು, ಆರೋಗ್ಯ ನಿರೀಕ್ಷಕ ಅಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಚಿತ್ರ : ಕೋಲಾರ ತಾಲೂಕಿನ ನರಸಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂತರ್ ಇಲಾಖೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್