ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಮುಖ್ಯ
ಬಳ್ಳಾರಿ, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ತಿಳಿಸಿದ್ದಾರೆ. ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಇವರ ಆಶ್ರಯದಲ್ಲಿ ಹಳೆಯ ನ್ಯಾಯಾಲಯ
ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಮುಖ್ಯ


ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಮುಖ್ಯ


ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಮುಖ್ಯ


ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಮುಖ್ಯ


ಬಳ್ಳಾರಿ, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ತಿಳಿಸಿದ್ದಾರೆ.

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಇವರ ಆಶ್ರಯದಲ್ಲಿ ಹಳೆಯ ನ್ಯಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಬಳ್ಳಾರಿ ವಿಭಾಗೀಯ ಕಚೇರಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಭಿಯೋಜಕರು ಮತ್ತು ತನಿಖಾಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಬೇಕು. ತನಿಖಾಧಿಕಾರಿಗಳು ಯಾವ ರೀತಿಯಾಗಿ ದೋಷರೋಪಣಾ ಪಟ್ಟಿ ತಯಾರಿಸಬೇಕು. ಜನಸಾಮಾನ್ಯರಿಗೆ ನ್ಯಾಯ ದೊರಕಿಸಲು ಅಭಿಯೋಜಕರ ಪಾತ್ರದೊಂದಿಗೆ ಪರಿಣಾಮಕಾರಿಯಾಗಿ ಸಾಧ್ಯವಾಗಲಿದೆ ಎಂದು ಹೇಳಿದರು.

ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು, ಸಂತ್ರಸ್ತರು ಇರುವಲ್ಲಿಯೇ ನ್ಯಾಯ ಸಿಗುವ ವ್ಯವಸ್ಥೆ ಆಗಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು, ಬಳ್ಳಾರಿ ವಿಭಾಗೀಯ ಕಚೇರಿಯು ನಾಲ್ಕು ಜಿಲ್ಲೆಗಳಿಗೆ ಕೇಂದ್ರಸ್ಥಾನವಾಗಿ ಆರಂಭಗೊಂಡಿರುವುದು ಸ್ವಾಗತಾರ್ಹ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ವೇದಿಕೆಯಲ್ಲಿದ್ದರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಬೆಂಗಳೂರಿನ ನಿರ್ದೇಶಕರಾದ ಅಂಜಲಿದೇವಿ ಅವರು, ಸರ್ಕಾರಿ ಅಭಿಯೋಜಕರು ಮತ್ತು ಪೊಲೀಸ್ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ನ್ಯಾಯದಾನ ಪ್ರಕ್ರಿಯೆ ಸರಿಯಾದ ಸಮಯಕ್ಕೆ ಆಗುತ್ತದೆ ಎಂದರು.

ಬಳ್ಳಾರಿ ವಿಭಾಗೀಯ ಕಚೇರಿಯ ನೂತನ ಕಾನೂನು ಅಧಿಕಾರಿ(ಹಿರಿಯ) ಬಿ.ಎಸ್. ಪಾಟೀಲ ಅವರು, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾರಿ ವಿಭಾಗೀಯ ಕಚೇರಿಯು 2022 ರಲ್ಲಿಯೇ ಕಲಬುರಗಿ ವಿಭಾಗದಿಂದ ಬೇರ್ಪಟ್ಟು ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು ಒಳಗೊಂಡು ವಿಭಾಗೀಯ ಕಚೇರಿ ಮಂಜೂರಾಗಿತ್ತು. ಸ್ಥಳದ ಕೊರತೆಯಿಂದ ಆರಂಭಗೊಂಡಿರಲಿಲ್ಲ. ಅದು ಈಗ ಕೂಡಿಬಂದಿದ್ದು, ನಾಲ್ಕು ಜಿಲ್ಲೆಗಳ ವಿಶೇಷಾಸಕ್ತಿ ವಹಿಸಲು ಸರ್ಕಾರ ಅವಕಾಶ ನೀಡಿದೆ ಎಂದು ಗಣ್ಯರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ‘ನೊಂದವರಿಗೆ ನ್ಯಾಯ’ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ‘ನ್ಯಾಯ ಜ್ಯೋತಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು ಮತ್ತು ಬಳ್ಳಾರಿ ವಿಭಾಗೀಯ ಕಚೇರಿಯ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಅರಸಿದ್ದಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ., ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಜಂಟಿ ನಿರ್ದೇಶಕ ರಮೇಶ್‍ಬಾಬು, ಲೋಕೋಪಯೋಗಿ ಇಲಾಖೆ ವಿಭಾಗದ ಕಾರ್ಯಪಾಲಕ ಅಭಿಯಂತರ ಹೇಮರಾಜ. ಕೆ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ ಸೇರಿದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಅಧಿಕಾರಿಗಳು, ವಕೀಲರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande