ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ
ನವದೆಹಲಿ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿವೆ ಎಂದು
Cong


ನವದೆಹಲಿ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದೆಹಲಿ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿವೆ ಎಂದು ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮತ ಕಳ್ಳತನವನ್ನು ತಡೆಯುವುದು ಎಲ್ಲರ ಜವಾಬ್ದಾರಿ ಎಂದು ಹೇಳಿ, ದೇಶವನ್ನು ಗುಲಾಮಗಿರಿಯ ಯುಗದತ್ತ ಕೊಂಡೊಯ್ಯುವ ಯತ್ನ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದರು. ನೆಹರು–ಪಟೇಲ್ ನಡುವಿನ ಭೇದವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲು ಕಾಂಗ್ರೆಸ್ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.

ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಸಿದ್ಧಾಂತಗಳ ನಡುವಿನ ಹೋರಾಟ ನಡೆಯುತ್ತಿದ್ದು, ಕಾಂಗ್ರೆಸ್ ಗಾಂಧೀಜಿಯವರ ಸತ್ಯದ ಮಾರ್ಗವನ್ನು ಅನುಸರಿಸಿ ಸರ್ಕಾರವನ್ನು ಎದುರಿಸುತ್ತದೆ ಎಂದು ಹೇಳಿದರು.

ಪ್ರತಿಭಟನಾ ಸಭೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಸಚಿನ್ ಪೈಲಟ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande