
ಬೆಂಗಳೂರು, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa