ಮಣಿಪುರದಲ್ಲಿ ಭದ್ರತಾ ಪಡೆಗಳ ಭಾರಿ ಕಾರ್ಯಾಚರಣೆ
ಇಂಫಾಲ್, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಳೆದ 24 ಗಂಟೆಗಳಲ್ಲಿ ಮಣಿಪುರದ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಮತ್ತು ರಾಜ್ಯ ಪೊಲೀಸರು ನಡೆಸಿದ ಸಂಯುಕ್ತ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದು, ನಿಷೇಧಿತ ಉಗ್ರ ಸಂಘಟನೆಗಳ ಸಕ್ರಿಯ ಕಾರ್ಯ
Arrest


ಇಂಫಾಲ್, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಳೆದ 24 ಗಂಟೆಗಳಲ್ಲಿ ಮಣಿಪುರದ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಮತ್ತು ರಾಜ್ಯ ಪೊಲೀಸರು ನಡೆಸಿದ ಸಂಯುಕ್ತ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದು, ನಿಷೇಧಿತ ಉಗ್ರ ಸಂಘಟನೆಗಳ ಸಕ್ರಿಯ ಕಾರ್ಯಕರ್ತರು ಹಾಗೂ ಒಬ್ಬ ಮಾದಕವಸ್ತು ಕಳ್ಳಸಾಗಣೆದಾರನನ್ನು ಬಂಧಿಸಲಾಗಿದೆ.

ಕಾಕ್ಚಿಂಗ್ ಜಿಲ್ಲೆಯ ಸುಗ್ನು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಎಸ್‌ಎಲ್‌ಆರ್, ಸ್ನೈಪರ್ ರೈಫಲ್, ಪಿಸ್ತೂಲ್, ಹ್ಯಾಂಡ್ ಗ್ರೆನೇಡ್, ಗುಂಡುಗಳು, ಲಾಂಚಿಂಗ್ ಟ್ಯೂಬ್‌ಗಳು ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಬಿಷ್ಣುಪುರ, ಇಂಫಾಲ್ ಪಶ್ಚಿಮ ಹಾಗೂ ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪ್ರೆಪಾಕ್ (ಪ್ರೊ) ಮತ್ತು ಯುಎನ್‌ಎಲ್‌ಎಫ್ ಸಂಘಟನೆಗಳಿಗೆ ಸೇರಿದ ಸಕ್ರಿಯ ಕೇಡರ್‌ಗಳು, ಸುಲಿಗೆಕೋರರು ಮತ್ತು ಇಬ್ಬರು ಮಹಿಳಾ ಉಗ್ರರನ್ನು ಬಂಧಿಸಲಾಗಿದೆ. ಇವರಿಂದ ಪಿಸ್ತೂಲ್, ಕಾರ್ಟ್ರಿಡ್ಜ್‌ಗಳು, ಮೊಬೈಲ್ ಫೋನ್‌ಗಳು ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದರ ಜೊತೆಗೆ, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೆರಾಯಿನ್ ನಂ.4 ತುಂಬಿದ ಏಳು ಸೋಪ್ ಬಾಕ್ಸ್‌ಗಳೊಂದಿಗೆ ಒಬ್ಬ ಮಾದಕವಸ್ತು ಕಳ್ಳಸಾಗಣೆದಾರನನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande