ಡಿ.19ಕ್ಕೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ
ವಿಜಯಪುರ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯ
ಡಿ.19ಕ್ಕೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ


ವಿಜಯಪುರ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉಪಸ್ಥಿತರಿರಲಿದ್ದು, ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಪತಿ ಡಾ. ಅರುಣ ಇನಾಮದಾರ ವರದಿ ಮಂಡಿಸಲಿದ್ದಾರೆ. ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಡಾ. ತೇಜಸ್ವಿನಿ ವಲ್ಲಭ, ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಸೈನ್ಸ್ & ಟೆಕ್ನಾಲಜಿ ವಿಭಾಗದ ಡೀನ್ ಡಾ. ಎಸ್. ವಿ. ಪಾಟೀಲ ಹಾಗೂ ಕಾನೂನು ವಿಭಾಗದ ಡೀನ್ ಡಾ. ರಘುವೀರ್ ಜಿ. ಕುಲಕರ್ಣಿ ಉಪಸ್ಥಿತರಿರುವರು.

ಈ ಘಟಿಕೋತ್ಸವದಲ್ಲಿ ಒಟ್ಟು 502 ಪದವಿ ಪ್ರಧಾನ ಮಾಡಲಾಗುತ್ತದೆ. ಇದರಲ್ಲಿ 11 ಪಿ.ಎಚ್.ಡಿ., 3 ಎಂ.ಸಿಎಚ್ (ಯುರಾಲಜಿ), 2 ಡಿ.ಎಂ. (ಕಾರ್ಡಿಯಾಲಜಿ), 239 ವೈದ್ಯಕೀಯ ಸ್ನಾತಕೋತ್ತರ ಪದವಿಗಳು, 3 ಫೆಲೋಶಿಪ್ಗಳು, 156 ಎಂಬಿಬಿಎಸ್ ಪದವಿಗಳು, 10 ಸ್ನಾತಕೋತ್ತರ ಅಲೈಡ್ ಹೆಲ್ತ್ ಪದವಿಗಳು, 19 ವಿಜ್ಞಾನ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿಗಳು ಮತ್ತು 13 ಬ್ಯಾಚುಲರ್ ಆಫ್ ಫಿಸಿಯೋಥೆರಪಿ 46 ಅಲೈಡ್ ವಿಜ್ಞಾನ ಪದವಿಗಳು ಸೇರಿವೆ.

ಇದೇ ವೇಳೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ 28 ಚಿನ್ನದ ಪದಕಗಳು ಮತ್ತು 3 ನಗದು ಬಹುಮಾನಗಳನ್ನು ಪ್ರದಾನ ಮಾಡಲಾಗುತ್ತದೆ. ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಡಾ. ನರ್ಲಾ ಸುರೇಖಾ ಮತ್ತು ಡಾ. ಶಂಕರ್ ನಾರಾಯಣನ್ ಆರ್ ತಲಾ ಎರಡು ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ. ಪದವಿ ವೈದ್ಯಕೀಯ ವಿಭಾಗದಲ್ಲಿ ಡಾ. ಯಶ್ ಆರ್ಯ ಅವರು ಐದು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ನಿಶ್ಚಿತಾ ಸಿ. ರಾಜ್ ಅವರು ಮೂರು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ಸಲೋನಿ ವರ್ಮಾ ಅವರು ಎರಡು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ಶಿರೀಷಾ ಎಂ. ಎಸ್. ಅವರು ಎರಡು ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ ಎಂದು ಪರೀಕ್ಷೆ ನಿಯಂತ್ರಕ ಡಾ. ಶಶಿಧರ ದೇವರಮನಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande