
ಧಾರವಾಡ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ.
ಇಲಾಖೆಯಿಂದ ವಿಶೇಷ ಚೇತನ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿ ರಹಿತ ವಿಶೇಷ ಶಾಲೆಗಳು, 1982 ರ ಅನುದಾನ ಸಂಹಿತೆಯಡಿ ವಸತಿರಹಿತ ವಿಶೇಷ ಶಾಲೆಗಳು, ವಿಕಲಚೇತನ ಉದ್ಯೋಗಸ್ಥ ಮಹಿಳೆಯರಿಗಾಗಿ ಹಾಗೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯಗಳು, ಹಿರಿಯ ನಾಗರಿಕರಿಗಾಗಿ ವೃದ್ದಾಶ್ರಮ ಕೇಂದ್ರಗಳು ಹಾಗೂ ಹಗಲು ಯೋಗಕ್ಷೇಮ ಕೇಂದ್ರಗಳು, ಹಿರಿಯ ನಾಗರಿಕರಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಪರಿಹರಿಸಲು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.
ಈ ಸೌಲಭ್ಯವನ್ನು ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಸದುಪಯೋಗಪಡಿಸಿಕೊಳ್ಳಲು ಧಾರವಾಡ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa