


ಬಳ್ಳಾರಿ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಸೋಮವಾರ ನಡೆಸಲಾಯಿತು.
ಹಿರಿಯ ಚೇತನ ಶಾಮನೂರು ಶಿವಶಂಕರಪ್ಪ ಅವರ ಭಾವಚಿತ್ರಕ್ಕೆ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ಪುಷ್ಪಾರ್ಚನೆ ಸಲ್ಲಿಸಿ, ಶ್ರೀಯುತರ ಸಮಾಜ ಸೇವೆ ಮತ್ತು ಶೈಕ್ಷಣಿಕ ಸಾಧನೆಗಳನ್ನು ಸ್ಮರಿಸುವ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.
ವೀರಶೈವ ಸಮಾಜದ ಸಂಘಟನೆಗಳು ಕೂಡ ಶ್ರೀಯುತರ ಸೇವೆಯನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿವೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್