
ನವದೆಹಲಿ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ ಕುಮಾರ್ ಗೋಯೆಲ್ ಅವರಿಗೆ ಕೇಂದ್ರ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಈ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಹಿರಿಯ ಸರ್ಕಾರಿ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa