
ಧಾರವಾಡ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯಿಂದ ಡಿಸೆಂಬರ 17 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರ ವಾಲ್ಮಿ, ಧಾರವಾಡದಲ್ಲಿ ತರಬೇತಿ ಪಡೆದ ಜಲ ಸಂಪನ್ಮೂಲ ಇಲಾಖೆಯ ಅಭಿಯಂತರರ ಸಮ್ಮೇಳನ ಜಲ ಸಂಕಲ್ಪ -2025 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಸ್ತುವಾರಿ ಸಚಿವರು ಮತ್ತು ಜಲ ಸಂಪನ್ಮೂಲ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು ಎಂದು ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ) ನಿರ್ದೇಶಕ ಡಾ. ಗಿರೀಶ ಎನ್.ಮರಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa