ಬೆಳಗಾವಿ ಅಧಿವೇಶನದ ಅವಧಿ ವಿಸ್ತರಿಸಲು ಅಶೋಕ ಮನವಿ
ಬೆಳಗಾವಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರ ವಿಸ್ತರಿಸಬೇಕೆಂದು ಕೋರಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
Letter


ಬೆಳಗಾವಿ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರ ವಿಸ್ತರಿಸಬೇಕೆಂದು ಕೋರಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಮಾನ್ಯ ಸದಸ್ಯರು ಪ್ರಸ್ತಾಪಿಸಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರಿಂದ ಇನ್ನೂ ಸಮರ್ಪಕ ಉತ್ತರ ದೊರಕಿಲ್ಲ ಎಂದು ಆರ್. ಅಶೋಕ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೆ ಜೊತೆಗೆ, ರಾಜ್ಯದಲ್ಲಿ ಕುಸಿದಿರುವ ಕಾನೂನು ಮತ್ತು ಸುವ್ಯವಸ್ಥೆ, ಸರ್ಕಾರದ ಇಲಾಖೆಗಳಲ್ಲಿನ ಅನುದಾನ ಬಳಕೆಯ ಕಳಪೆ ಸಾಧನೆ, ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಅನೇಕ ಮಹತ್ವದ ವಿಚಾರಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮಾನ್ಯ ಸದಸ್ಯರಿಗೆ ಇನ್ನೂ ಸಾಕಷ್ಟು ಸಮಯಾವಕಾಶ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಸನ್ಮಾನ್ಯ ಸಭಾಧ್ಯಕ್ಷರು ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವಂತೆ ತಮ್ಮ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವರು ಎಂಬ ವಿಶ್ವಾಸವನ್ನು ಪ್ರತಿಪಕ್ಷ ನಾಯಕ ಅಶೋಕ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande