ಸಿಪಿಐಎಂ ನೇತೃತ್ವದಲ್ಲಿ ಡಿ.೨೧ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಸಿಪಿಐಎಂ ನೇತೃತ್ವದಲ್ಲಿ ಡಿ.೨೧ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
. ಚಿತ್ರ : ಸಿಪಿಐಎಂ ನೇತೃತ್ವದಲ್ಲಿ ಡಿ.೨೧ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸಿಪಿಐಎಂ ಪಕ್ಷದ ಕೋಲಾರ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


ಕೋಲಾರ, ೧೬ ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜನಸಾಮಾನ್ಯರ, ರೈತರ, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಡಿ.೨೧ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಬಹಿರಂಗ ಸಭೆ ಮೂಲಕ ಮುಖ್ಯಮಂತ್ರಿಗಳಿಗೆ ಬೇಡಿಕೆಗಳು ಪಟ್ಟಿ ಸಲ್ಲಿಸಲಾಗುತ್ತದೆ ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು.

ಕೋಲಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಪಿಐಎಂ ಪಕ್ಷದ ನೇತೃತ್ವದಲ್ಲಿ ರಾಜ್ಯಾದ್ಯಂತ ಜನಾಂದೋಲದ ಮೂಲಕ ಮನೆಮನೆಗೆ ಭೇಟಿ ನೀಡಿ ಆಳುವ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ದ ಸಹಿ ಸಂಗ್ರಹ ಹಾಗೂ ಪ್ರಚಾರಾಂದೋಲನ ಕೈಗೊಳ್ಳಲಾಗಿತ್ತು ಇದರ ಅಂತಿಮ ಭಾಗವಾಗಿ ಡಿ.೨೦ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಕನಿಷ್ಠ ೩೦ ಸಾವಿರ ಜನ ಕೋಲಾರ ಜಿಲ್ಲೆಯಿಂದ ೨ ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಜನಸಾಮಾನ್ಯರು ಹಾಗೂ ರೈತರ ಸಮಸ್ಯೆಗಳನ್ನು ಅರಿತು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಹೋರಾಟಗಳನ್ನು ರೂಪಿಸಲಾಗಿದೆ ಪ್ರಮುಖವಾಗಿ ಜಿಲ್ಲೆಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ ನೀರು ಹರಿಸಬೇಕು, ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣ, ಸ್ಥಳೀಯ ಜನರ ಸಮಸ್ಯೆಗಳಿಗೆ ಪರಿಹಾರ, ನಿವೇಶನಗಳಿಗೆ ಹಕ್ಕುಪತ್ರ, ವಸತಿರಹಿತರಿಗೆ ನಿವೇಶನ, ಭೂಮಿ, ಉದ್ಯೋಗ ಇತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಈ ಹೋರಾಟ ರೂಪಿಸಲಾಗಿದೆ ಎಂದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕೇಂದ್ರದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ನಂತರ ಸಾಮಾನ್ಯ ಜನರು ಸೇರಿದಂತೆ ಕಾರ್ಮಿಕರು, ರೈತರು, ಕೂಲಿ ಕಾರ್ಮಿಕರು ಸಂಕಷ್ಟವನ್ನು ಎದುರಿಸಬೇಕಾಗಿದೆ ಕಾರ್ಮಿಕರ ಹಕ್ಕುಗಳನ್ನು ಅಸ್ಥಿರಗೊಳಿಸಲು ಹೊರಟಿದ್ದಾರೆ ಶಿಕ್ಷಣ, ಉದ್ಯೋಗ, ವಂಚನೆಯಾಗಿ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ ನಡೆಯತ್ತಿದೆ ಇದರ ವಿರುದ್ದವಾಗಿ ಈ ಪ್ರತಿಭಟನೆ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಸಿಪಿಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಸಿಪಿಐಎಂ ಪಕ್ಷವು ಈಗಾಗಲೇ ಮನೆ ಮನೆಗೆ ಭೇಟಿ ಮಾಡಿ ಕರಪತ್ರಗಳನ್ನು ಹಂಚುವ ಜೊತೆಗೆ ಗ್ರಾಮಗಳಲ್ಲಿ, ವಾರ್ಡ್ ಗಳಲ್ಲಿ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿ ತಾಲೂಕು ಮಟ್ಟದ ಅಧಿಕಾರಿಗಳಿಂದ ಆಗುವ ಕೆಲಸಗಳ ಜಾರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಿ.೨ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಶ್ರೀನಿವಾಸಪುರ ತಾಲೂಕು ಕಾರ್ಯದರ್ಶಿ ಪಿ.ಆರ್ ನವೀನ್ ಕುಮಾರ್, ಬಂಗಾರಪೇಟೆ ತಾಲೂಕು ಕಾರ್ಯದರ್ಶಿ ಅಪ್ಪಯ್ಯಣ್ಣ ಇದ್ದರು .

ಚಿತ್ರ : ಸಿಪಿಐಎಂ ನೇತೃತ್ವದಲ್ಲಿ ಡಿ.೨೧ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸಿಪಿಐಎಂ ಪಕ್ಷದ ಕೋಲಾರ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande