ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ ಪೂಜೆ ಸಲ್ಲಿಸಿ ಕೇಕ್ ಕತ್ತರಿಸಿ ಶುಭ ಹಾರೈಸಿದ ಕಾರ್ಯಕರ್ತರು
ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ ಪೂಜೆ ಸಲ್ಲಿಸಿ ಕೇಕ್ ಕತ್ತರಿಸಿ ಶುಭ ಹಾರೈಸಿದ ಕಾರ್ಯಕರ್ತರು.
ಚಿತ್ರ ; ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕೋಲಾರ ನಗರದ ಸಾಯಿಬಾಬಾ ಮಂದಿರದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಕಾರ್ಯಕರ್ತರು ಶುಭ ಹಾರೈಸಿದರು.


ಕೋಲಾರ, ೧೬ ಡಿಸೆಂಬರ್ (ಹಿ.ಸ.) ಆಂಕರ್ :

ಆ್ಯಂಕರ್ : ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ೬೬ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಸಾಯಿಬಾಬಾ ಮಂದಿರದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಕಾರ್ಯಕರ್ತರು ಶುಭ ಹಾರೈಸಿದರು.

ಈ ವೇಳೆ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯದೊಂದಿಗೆ, ಇನ್ನೂ ಸುದೀರ್ಘಕಾಲ ದೇಶಸೇವೆ ನಡೆಸುವ ಶಕ್ತಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

ಚಿತ್ರ ; ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕೋಲಾರ ನಗರದ ಸಾಯಿಬಾಬಾ ಮಂದಿರದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಕಾರ್ಯಕರ್ತರು ಶುಭ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande