35,560 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ : ಆಯುಕ್ತ ಜುಬಿನ್ ಮೊಹೊಪಾತ್ರ
ರಾಯಚೂರು, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಯಚೂರು ನಗರದಲ್ಲಿ ರಾಷ್ಟಿಯ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ.21ರಿಂದ 24ರವರೆಗೆ ಐದು ವರ್ಷದೊಳಗಿನ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ
35,560 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ: ಆಯುಕ್ತ ಜುಬಿನ್ ಮೊಹೊಪಾತ್ರ


35,560 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ: ಆಯುಕ್ತ ಜುಬಿನ್ ಮೊಹೊಪಾತ್ರ


ರಾಯಚೂರು, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ನಗರದಲ್ಲಿ ರಾಷ್ಟಿಯ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ.21ರಿಂದ 24ರವರೆಗೆ ಐದು ವರ್ಷದೊಳಗಿನ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ ಅವರು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ದಂದು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿದ ಪಲ್ಸ್ ಪೋಲಿಯೋ ನಗರ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಮಗು ಲಸಿಕೆಯಿಂದ ವಂಚಿತವಾಗದ0ತೆ ನೋಡಿಕೊಳ್ಳಲು ನಗರ ಪ್ರದೇಶಗಳಲ್ಲಿ ಒಟ್ಟು 143 ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. 9 ಟ್ರಾಂಜಿಟ್ ಹಾಗೂ 06 ಸಂಚಾರಿ (ಮೊಬೈಲ್) ತಂಡ ರಚಿಸಲಾಗಿದೆ. ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಒಟ್ಟು 286 ವ್ಯಾಕ್ಸಿನೆಟರ್ಸ್, 31 ಮೇಲ್ವಿಚಾರಕರಿದ್ದು, ರಾಯಚೂರು ನಗರದಲ್ಲಿ ಒಟ್ಟು 62,685 ಮನೆಗಳನ್ನು ಲಸಿಕಾ ಅಭಿಯಾನದಡಿ ಸಂದರ್ಶಿಸುವ ಗುರಿ ಹೊಂದಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಮಕ್ಕಳಿಗೆ ಎರಡು ಹನಿ ಪೋಲಿಯೋ ಹಾಕಿಸುವ ಮೂಲಕ ಕಳೆದ 14 ವರ್ಷಗಳಿಂದ ನಮ್ಮ ದೇಶದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಎಂಬ ಹೆಗ್ಗಳಿಕೆಯನ್ನು ನಾವು ಮುಂದುವರೆಸೋಣ ಎಂದು ಸಂಬ0ಧಿಸಿದ ಅಧಿಕಾರಿಗಳಿಗೆ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರಾ ಅವರು ಸೂಚಿಸಿದರು.

ಭಾನುವಾರದಂದು ಕುಟುಂಬದ ಸದಸ್ಯರೆಲ್ಲರೂ ಮನೆಯಲ್ಲಿ ಇರುವುದರಿಂದ ಇಂದಿನಿ0ದಲೇ ನಗರಪಾಲಿಕೆಯ ತ್ಯಾಜ್ಯ ವಿಲೇವಾರಿ ವಾಹನದ ಮೂಲಕ ಮೈಕಿಂಗ್, ಪ್ರಮುಖ ಸ್ಥಳಗಳಲ್ಲಿ ಹೊರ್ಡಿಂಗ್ಸ್ಗಳಿಗೆ ಪ್ಲೇಕ್ಸ್ ಅಳವಡಿಕೆ ಹಾಗೂ ವಾಟ್ಸ್ ಆಪ್, ಫೇಸ್‌ಬುಕ್, ಎಕ್ಸ್ ಸೇರಿದಂತೆ ಮುಂತಾದ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಮಾರುಕಟ್ಟೆ, ಕೈಗಾರಿಕಾ ಪ್ರದೇಶ ಸೇರಿದಂತೆ ಎಲ್ಲ 143 ಬೂತ್‌ಗಳಲ್ಲಿ ಮೊದಲ ದಿನವೇ ಶೇಕಡ 100 ರಷ್ಟು ಗುರಿ ಸಾಧಿಸಲು ಕಾರ್ಯಯೋಜನೆ ಹಾಕಿಕೊಳ್ಳಬೇಕೆಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದಿನ್, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಜ್ವಲ್‌ಕುಮಾರ್, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಪರಿಸರ ಅಭಿಯಂತರರು ಜಯಪಾಲ್ ರೆಡ್ಡಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಬಿ.ಹೆಚ್.ಇ.ಓ, ಸರೋಜಾ ಕೆ, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಸುರೇಶ್, ಕ್ಷೇತ್ರ ಲಸಿಕಾ ಮೇಲ್ವಿಚಾರಕ ಕೋಪ್ರೇಶ್, ಡಿ.ಡಿ.ಎಮ್ ಲೋಕೇಶ್ ಸೇರಿದಂತೆ ಪಾಲಿಕೆ ವಾಹನ ವಿಭಾಗದ ವೆಂಕಟೇಶ ಕುಲಕರ್ಣಿ ಹಾಗೂ ಪಾಲಿಕೆ ಆರೋಗ್ಯ ನಿರೀಕ್ಷಣಾಧಿಕಾರಿಗಳು ಸಭೆಯಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande