
ಕೋಲಾರ, ೧೮ ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನಮ್ಮ ರಾಷ್ಡ್ರೀಯ ಗೀತೆಯಾದ ವಂದೇ ಮಾತರಂ ಗೆ ಎಲ್ಲರೂ ಗೌರವ ಸಲ್ಲಿಸ ಬೇಕಾದ ಅಗತ್ಯವಿದೆ ಎಂದು ಮುಳಬಾಗಿಲು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್.ರವಿಚಂದ್ರ ತಿಳಿಸಿದರು.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸಂವಹನ ಇಲಾಖೆ, ಮೈಸೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೋಲಾರ, ಮುಳಬಾಗಿಲು ತಾಲೂಕು ಆಡಳಿತ, ತಾಲೂಕು ಪಂಚಾಯತ್, ಮುಳಬಾಗಿಲು ಬಾಲಕಿಯರ ಪದವಿ ಪೂರ್ವ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಮುಳಬಾಗಿಲು ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ವಂದೇ ಮಾತರಂ ೧೫೦ನೇ ವರ್ಷಗಳ ಸ್ಮರಣಾರ್ಥ ಹಾಗೂ ಬಾಲ್ಯ ವಿವಾಹ ಮುಕ್ತ ಭಾರತ ವಿಶೇಷ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ರಾಷ್ಟ್ರೀಯ ಗೀತೆಗೆ ಗೌರವ ಸಲ್ಲಿಸುವ ವಿಶೇಷ ಕಾರ್ಯಕ್ರಮ ನಡೆಸಿದ ಮೈಸೂರಿನ ಕೇಂದ್ರ ಸಂವಹನ ಇಲಾಖೆಗೆ ಅವರು ಅಭಿನಂದನೆ ಸಲ್ಲಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರಪ್ಪ ಮಾತನಾಡಿ ಇಂದಿಗೂ ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಬಾಲ್ಯ ವಿವಾಹ ತಡೆಗಟ್ಟಬೇಕಾದ ಅಗತ್ಯವಿದೆ. ಈ ಬಗ್ಗೆ ಜನಜಾಗೃತಿ ಮೂಡಿಸಬೇಕಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಪ್ರಚಾರಾಧಿಕಾರಿ ಶೃತಿ ಎಸ್.ಟಿ, ಕೇಂದ್ರ ಸರ್ಕಾರವು ವಂದೇ ಮಾತರಂಗೆ ೧೫೦ ವರ್ಷಗಳಾದ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ದೇಶಭಕ್ತಿ ಮೂಡಿಸುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಮ್ಯಾ, ವಂದೇ ಮಾತರಂ ಮತ್ತು ಬಾಲ್ಯ ವಿವಾಹ ಮುಕ್ತ ಭಾರತ, ಪೋಷಣ ಅಭಿಯಾನ ಕುರಿತು ಮಾಹಿತಿ ಹಂಚಿಕೊಂಡರು.
ವಂದೇ ಮಾತರಂ ಗೀತೆ ಪ್ರಸ್ತುತ ಪಡಿಸಿ ಗೌರವ ಸಲ್ಲಿಸಲಾಯಿತು. ಹಿಂದಿನ ದಿನ ಆಯೋಜಿಸಲಾಗಿದ್ದ ವಿಶೇಷ ರಂಗೋಲಿ ಸ್ಪರ್ಧೆ, ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಮಿರ್ಜಾ ಕಾಮಿಲ್ ಬೇಗ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮಕ್ಕೆ ಮುನ್ನ ಪ್ರಧಾನ ಮಂತ್ರಿ ಯವರ ಆಶಯದಂತೆ ನಡೆಯುತ್ತಿರುವ ಏಕ್ ಪೇಡ್ ಮಾ ಕೇ ನಾಮ್ ಅಭಿಯಾನದಡಿ ಅತಿಥಿಗಳು ಸೀಬೆ ಸಸಿ ನೆಟ್ಟರು.
ಕ್ಷೇತ್ರ ಪ್ರಚಾರ ಸಹಾಯಕ ದರ್ಶನ್ ಪಿ, ಸ್ವಾಗತಿಸಿದರು, ಕನ್ನಡ ಉಪನ್ಯಾಸಕರಾದ ಜೆ. ಜಿ ನಾಗರಾಜ್ ವಂದಿಸಿದರು. ಇತಿಹಾಸ ಉಪನ್ಯಾಸಕರಾದ ನಾರಾಯಣಸ್ವಾಮಿ ಕಾರ್ಯಕ್ರಮ ನಿರೂಪಣೆ ಮಾಡಿದರು.
ಚಿತ್ರ ; ಮುಳಬಾಗಿಲು ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ವಂದೇ ಮಾತರಂ ೧೫೦ನೇ ವರ್ಷಗಳ ಸ್ಮರಣಾರ್ಥ ಹಾಗೂ ಬಾಲ್ಯ ವಿವಾಹ ಮುಕ್ತ ಭಾರತ ವಿಶೇಷ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್.ರವಿಚಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್