
ಬಳ್ಳಾರಿ, 19 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯತಿಗಳನ್ನು ದುರ್ಬಲಗೊಳಿಸುವ ಈ ಮಸೂದೆಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿ ಡಿಸೆಂಬರ್ 22 ರ ಸೋಮವಾರ ರಾಜ್ಯದ ಎಲ್ಲಾ ಸಂಸದರ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಜಿಲ್ಲಾ ಸಂಚಾಲಕಿ ಅಕ್ಕಮಹಾದೇವಿ ಅವರು ತಿಳಿಸಿದ್ದಾರೆ.
ಸುದ್ದಿಗಾರರ ಶುಕ್ರವಾರ ಮಾತನಾಡಿದ ಅವರು, ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಹೊಸ
ಮಸೂದೆಯನ್ನು ರೂಪಿಸಲಾಗಿದೆ. ನರೇಗಾ ಕೂಲಿ ಕಾರ್ಮಿಕರ ಶೋಷಣೆಯಾಗಲಿದೆ. ಈ ಮಸೂದೆ ಮೂಲಕ ಉದ್ಯೋಗ ಖಾತ್ರಿ ಹಕ್ಕನ್ನು ಅನೇಕರು ಕಳೆದುಕೊಳ್ಳುವ ಆತಂಕವಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅನ್ನಪೂರ್ಣ ಸಿರುಗುಪ್ಪ, ಸ್ಯಾಮವೆಲ್ ಬಳ್ಳಾರಿ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್