ಡಿ.೨೨ ಶಿಕ್ಷಕರಿಗೆ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
ಡಿ.೨೨ ಶಿಕ್ಷಕರಿಗೆ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
ಡಿ.೨೨ ಶಿಕ್ಷಕರಿಗೆ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ


ಕೋಲಾರ, ೧೯ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆಯಿಂದ ೨೦೨೫-೨೬ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಡಿ.೨೨ರಂದು ಬೆಳಗ್ಗೆ ೯-೩೦ ಗಂಟೆಗೆ ನಗರದ ಮೆಥೋಡಿಸ್ಟ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದು, ತಾಲ್ಲೂಕು ಹಂತದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತ ಶಿಕ್ಷಕರು ಜಿಲ್ಲಾಮಟ್ಟಕ್ಕೆ ಹಾಜರಾಗುವಂತೆ ಡಿಡಿಪಿಐ ಅಲ್ಮಾಸ್ ಫರ್ವೀನ್ ತಾಜ್ ಕೋರಿದ್ದಾರೆ.

ತಾಲ್ಲೂಕು ಹಂತದಲ್ಲಿ ಪ್ರಥಮ ಸ್ಥಾನ ಪಡೆದ ಎಲ್ಲಾ ಶಿಕ್ಷಕರು ಕಡ್ಡಾಯವಾಗಿ ಜಿಲ್ಲಾಮಟ್ಟದ ಈ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಂತೆ ಕೋರಿರುವ ಅವರು ಬರುವ ಶಿಕ್ಷಕರು ತಪ್ಪದೇ ತಮ್ಮ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ತರಲು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande