
ಕೋಲಾರ, ೧೯ ಡಿಸೆಂಬರ್ (ಹಿ.ಸ) :
ಆ್ಯಂಕರ್ : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ೧೯ ವರ್ಷದೊಳಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರ ೨೦೨೫-೨೬ನೇ ಸಾಲಿನ ರಾಜ್ಯ ಮಟ್ಟದ ಟೆನ್ನಿಕಾಯ್ಟ್ ಸ್ಪರ್ಧೆಯನ್ನು ಗದಗ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದು ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಎನ್.ಜಿ.ಹುಲ್ಕೂರು ಗ್ರಾಮದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯು ಈ ಪ್ರತಿಷ್ಠಿತ ಕ್ರೀಡಾಕೂಟವನ್ನು ಡಿಸೆಂಬರ್ ೨೧ ರಿಂದ ೨೨ ರವರೆಗೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು.ರಾಜ್ಯಾದ್ಯ0ತ ಇರುವ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಈ ಸ್ಪರ್ಧೆಯ ಕುರಿತು, ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯು ಎಲ್ಲಾ ಜಿಲ್ಲೆಗಳಿಗೆ ಪ್ರಕಟಣೆ ಹೊರಡಿಸಿದೆ.
ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಭಾರ್ಗವ್ ರಾಮ್ ಅವರು ಮಾತನಾಡಿ ರಾಜ್ಯ ಮಟ್ಟದ ಟೆನ್ನಿಕಾಯ್ಡ್ ಕ್ರೀಡಾಕೂಟದಲ್ಲಿ ಕೋಲಾರ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲೂ ವಿಜೇತರಾಗುವ ವಿಶ್ವಾಸವಿದೆ ಎಂದರು.
ಕಾಲೇಜಿನ ಬಾಲಕರು ಹಾಗೂ ಬಾಲಕಿಯರ ಎರಡು ತಂಡಗಳು ಸಹ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಕೆಜಿಎಫ್ ತಾಲ್ಲೂಕಿಗೆ ಕೀರ್ತಿ ತಂದಿದ್ದರು,ಈಗ ರಾಜ್ಯ ಮಟ್ಟದಲ್ಲಿ ವಿಜೇತರಾಗುವ ಮೂಲಕ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಈ ಸ್ಪರ್ಧೆಯು ರಾಜ್ಯದ ಯುವ ಟೆನ್ನಿಕಾಯ್ಟ್ ಆಟಗಾರರಿಗೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಲು ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಉತ್ತಮ ಅವಕಾಶ ಒದಗಿಸಲಿದೆ ಎಂದರು.
ಈ ಸಂಧರ್ಭದಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾದ ಮಂಜುನಾಥ್, ಕನ್ನಡ ಉಪನ್ಯಾಸಕರಾದ ಶಿವಕುಮಾರ್,ಲೆಕ್ಕ ಮತ್ತು ವಾಣಿಜ್ಯ ಶಾಸ್ತ್ರದ ಉಪನ್ಯಾಸಕರಾದ ಮನೋಹರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಚಿತ್ರ : ಕೆಜಿಎಫ್ ತಾಲ್ಲೂಕಿನ ಎನ್.ಜಿ.ಹುಲ್ಕೂರು ಗ್ರಾಮದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಗದಗ್‌ನಲ್ಲಿ ನಡೆದ ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಟೆನಿಕಾಯ್ಟ್ ಸ್ಪರ್ಧೆಯಲ್ಲಿ ವಿಜೇತರಾದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್