ನರಸಾಪುರ ಬಳಿ ರಾಷ್ಟೀಯ ಹೆದ್ದಾರಿ ಮೇಲುಸೇತುವೆ ಉದ್ಘಾಟನೆ
ನರಸಾಪುರ ಬಳಿ ರಾಷ್ಟೀಯ ಹೆದ್ದಾರಿ ಮೇಲುಸೇತುವೆ ಉದ್ಘಾಟನೆ:
ನೂತನ ಮೇಲ್ಸೇತುವೆಯನ್ನು ಸಂಸದ ಎಂ.ಮಲ್ಲೇಶ್ ಬಾಬು ಉದ್ಘಾಟಿಸಿದರು.


ಕೋಲಾರ, ೨೦ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಕೋಲಾರ ಜಿಲ್ಲೆಯ ನರಸಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ ನೂತನ ಮೇಲ್ಸೇತುವೆಯನ್ನು ಸಂಸದ ಎಂ.ಮಲ್ಲೇಶ್ ಬಾಬು ಉದ್ಘಾಟಿಸಿದರು.

ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೆಳ್ಳೂರು ಮತ್ತು ನರಸಾಪುರ ಕೈಗಾರಿಕಾ ವಲಯದ ಮೇಲ್ಸೇತುವೆಯನ್ನು ಸುಮಾರು ೨೮ ಕೋಟಿ ೩ ಲಕ್ಷ ರೂಪಾಯಿ ವೆಚ್ಚದಲ್ಲಿ ೧.೬ ಕಿಲೋಮೀಟರ್ ನಿರ್ಮಿಸಲಾಗಿದ್ದು, ಸಾರ್ವಜನಿಕರು ಸಂಚರಿಸಲು ಮುಕ್ತವಾಗಿದೆ ಎಂದರು.

ಈಗ ಒಂದು ಕಡೆ ಮಾತ್ರ ರಸ್ತೆ ಮುಕ್ತವಾಗಿದ್ದು, ಮತ್ತೊಂದು ಕಡೆ ಒಂದು ವಾರದೊಳಗೆ ಸಾರ್ವಜನಿಕರ ಸಂಚಾರಕ್ಕೆ ಸುಗಮಗೊಳಿಸಲಾಗುವುದು. ಅದರ ಉದ್ಘಾಟನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗವುದು ಎಂದರು.

ಮುಳಬಾಗಿಲು ರಸ್ತೆಯ ತಂಬಹಳ್ಳಿ ಮತ್ತು ವಡಗೂರು ರಸ್ತೆಯಲ್ಲಿ ನಿರ್ಮಿಸುತ್ತಿರುವ ಮೇಲ್ಸೇತುವೆಯನ್ನು ಜನವರಿ ೩೦ ರ ವೇಳೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ನರಸಿಂಹ ತೀರ್ಥ ಮತ್ತು ವಡ್ಡಹಳ್ಳಿ ಬಳಿ ನಿರ್ಮಿಸುತ್ತಿರುವ ಮೇಲ್ಸೇತುವೆ ಕಾಮಗಾರಿ ಫೆಬ್ರವರಿಯಲ್ಲಿ ಪೂರ್ಣಗೊಳ್ಳಲಿದೆ. ಎಲ್ಲಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸೇರಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande