ಹಂಪಿಗೆ ಭೇಟಿ ನೀಡಿ ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡ
ಹಂಪಿ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡವು ಹಂಪಿಗೆ ಭೇಟಿ ನೀಡಿ ವಿಜಯನಗರ ಸಾಮ್ರಾಜ್ಯದ ಸಮೃದ್ದಿ ಸಂದೇಶದ ಆದರ್ಶದೊಂದಿಗೆ ವಿಕಸಿತ ಭಾರತದ ಕ್ರಮಗಳ ಮೂಲಕ ಸಮೃದ್ದ ಭಾರತ ನಿರ್ಮಾಣದ ಸಂದೇಶ ಕೊಂಡೊಯ್ಯಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಮತ್ತು ಕಂಪನಿಗಳ ವ್ಯವ
ಹಂಪಿಗೆ ಭೇಟಿ ನೀಡಿ ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡ


ಹಂಪಿಗೆ ಭೇಟಿ ನೀಡಿ ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡ


ಹಂಪಿಗೆ ಭೇಟಿ ನೀಡಿ ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡ


ಹಂಪಿ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡವು ಹಂಪಿಗೆ ಭೇಟಿ ನೀಡಿ ವಿಜಯನಗರ ಸಾಮ್ರಾಜ್ಯದ ಸಮೃದ್ದಿ ಸಂದೇಶದ ಆದರ್ಶದೊಂದಿಗೆ ವಿಕಸಿತ ಭಾರತದ ಕ್ರಮಗಳ ಮೂಲಕ ಸಮೃದ್ದ ಭಾರತ ನಿರ್ಮಾಣದ ಸಂದೇಶ ಕೊಂಡೊಯ್ಯಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಮತ್ತು ಕಂಪನಿಗಳ ವ್ಯವಹಾರ ಸಚಿವರಾದ ನಿರ್ಮಲ ಸೀತಾರಾಮನ್ ತಿಳಿಸಿದರು.

ಅವರು ಭಾನುವಾರ ಕಮಲಾಪುರ ಬಳಿಯ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ಹುಣಸೆ, ಸೀತಾಫಲ, ಲಕ್ಷಣ ಫಲ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ನೀರೆರೆದು ಕಮಲಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಸಿಕೆ ಹಾಕಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನನ್ನೊಂದಿಗೆ ಹಂಪಿಗೆ ಬಂದಿದ್ದ ಅಧಿಕಾರಿಗಳಿಗೆ ವಿಶ್ವ ಪಾರಂಪರಿಕ ತಾಣ ವೀಕ್ಷಿಸಲು ಅವಕಾಶ ಸಿಕ್ಕಿದೆ. ಇದು ವಿಜಯನಗರ ಸಾಮ್ರಾಜ್ಯದ ಮಹತ್ವ, ವೈಭವ ಅರಿತುಕೊಳ್ಳಲು ಸಾಧ್ಯವಾಗಿದೆ. ಇಲ್ಲಿ ಚಿಂತನ ಮಂಥನ ಸಭೆಯನ್ನು ಅಧಿಕಾರಿಗಳೊಂದಿಗೆ ಅರ್ಥಪೂರ್ಣವಾಗಿ ನಡೆಸಲಾಗಿದೆ. ಹಂಪಿಗೆ ಬಂದಿದ್ದಕ್ಕೆ ವಿಜಯನಗರದ ಸಂದೇಶವಾದ ಎಲ್ಲರಿಗೂ ಸಮೃದ್ದಿ ಎಂಬ ಆದರ್ಶವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ಪ್ರಧಾನ ಮಂತ್ರಿಗಳು ಇದೇ ಆದರ್ಶಗಳೊಂದಿಗೆ ವಿವಿಧ ಯೋಜನೆಗಳನ್ನು ಜನರಿಗೆ ನೀಡಿದ್ದು ಮುಂದಿನ ಬಜೆಟ್ ಮಂಡಿಸಲು ತಿಂಗಳ, ಕೆಲವು ದಿನಗಳ ಬಾಕಿ ಇರುವ ಈ ಸಂದರ್ಭದಲ್ಲಿ ವಿಜಯನಗರದಿಂದ ಪ್ರೇರಣೆ ಪಡೆದು 2047ರ ವಿಕಸಿತ ಭಾರತದ ನಿರ್ಮಾಣದ ಗುರಿಯೊಂದಿಗೆ ವಿವಿಧ ಕ್ರಮಗಳ ಮೂಲಕ ಸಮೃದ್ದ ಭಾರತದ ನಿರ್ಮಾಣಕ್ಕೆ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು.

ಪೋಲಿಯೋ ಮುಕ್ತ ಭಾರತ ; ಮಾನವ ಕುಲಕ್ಕೆ ಶಾಪದಂತಿರುವ ಪೋಲಿಯೋ ವೈರಸನ್ನು ಭಾರತ ದೇಶದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಾಗಿದೆ. ಇದಕ್ಕಾಗಿ ಇದರ ನಿರ್ಮೂಲನೆಯಲ್ಲಿ ತೊಡಗಿರುವ ವೈದ್ಯಕೀಯ ಸಮುದಾಯಕ್ಕೆ ಸೂಕ್ತ ಬೆಂಬಲ ನೀಡಬೇಕಾಗಿದೆ. ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿ, ನರ್ಸ್‍ಗಳು ಹಾಗೂ ಮಕ್ಕಳ ಆರೈಕೆಯಲ್ಲಿ ತೊಡಗಿರುವ ಎಲ್ಲರಿಗೂ ಅಗತ್ಯವಾದ ಸಹಾಯ ದೊರಕುವಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ಹುಣಸೆ ಗಿಡ ನೆಟ್ಟ ಸಚಿವರು ; ಕೇಂದ್ರ ಹಣಕಾಸು ಸಚಿವರು ಹವಾಮಾ ಕಚೇರಿ ಆವರಣದಲ್ಲಿ ಹುಣಸೆ ಗಿಡ ನೆಟ್ಟು ನೀರೆರೆದರು. ಇದನ್ನು ಪ್ರಸ್ತಾಪಿಸಿದ ಸಚಿವರು ಕಳೆದ ಅಕ್ಟೋಬರ್ ತಿಂಗಳಲ್ಲಿ ಕೂಡ್ಲಿಗಿ ತಾಲ್ಲೂಕಿನ ಕಸಾಪುರ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಅವರ ಸಂಸದರ ನಿಧಿಯಿಂದ ನಿರ್ಮಿಸಲಾದ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಮತ್ತು ಶೇಂಗಾ ಹಾಗೂ ಹುಣಸೆ ಹಣ್ಣಿನ ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಸಂದರ್ಭವನ್ನು ನೆನೆದು ಅಲ್ಲಿನ ಜನರ ಜೀವನ ಎಷ್ಟು ಕಷ್ಟಕರವಾಗಿದೆ ಎಂಬುದು ನನಗೆ ತಿಳಿದಿದೆ. ನನ್ನೊಂದಿಗೆ ಆಗಮಿಸಿದ 120 ಅಧಿಕಾರಿಗಳೂ ಸಹ ಒಂದೊಂದು ಗಿಡವನ್ನು ನೆಟ್ಟಿದ್ದು ಇದು ಮುಂದಿನ ಭವಿಷ್ಯಕ್ಕೆ ಅನುಕೂಲ ಕಲ್ಪಿಸುವುದಲ್ಲದೇ ಜಿಲ್ಲೆಯ ಹಸಿರು ಮತ್ತು ಪರಿಸರ ಸ್ನೇಹಿಯ ಸಂದೇಶ ನೀಡಲು ಸಾಧ್ಯವಾಗಿದೆ ಎಂದರು.

ಕಂಪನಿ ವ್ಯವಹಾರಗಳು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವರಾದ ಹರ್ಷ ಮಲ್ಹೋತ್ರಾ, ಸಂಸದರಾದ ಈ.ತುಕಾರಾಂ, ಶಾಸಕರಾದ ಹೆಚ್.ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್, ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ನಾಗರಾಜು ಮದ್ದೀರಲಾ, ಕೇಂದ್ರ ನೇರ ತೆರಿಗೆ ಮಂಡಳಿಯ ಅಧ್ಯಕ್ಷರಾದ ರವಿ ಅಗರ್ವಾಲ್, ಹಣಕಾಸು ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅನುರಾಧ ಠಾಕೂರ್, ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ದ ಶ್ರವಣ್.ಪಿ, ಹಣಕಾಸು ಇಲಾಖೆ ಸಾರ್ವಜನಿಕ ಉದ್ದಿಮೆಗಳ ಇಲಾಖೆ ಕಾರ್ಯದರ್ಶಿ ಕೆ.ಮೋಸಸ್ ಚಲೈ, ಕಂಪನಿ ವ್ಯವಹಾರಗಳ ಸಚಿವಾಲಯ ಕಾರ್ಯದರ್ಶಿ ದೀಪ್ತಿಗೌರ್ ಮುಖರ್ಜಿ ಹಾಗೂ ಇನ್ನಿತರೆ ಅಧಿಕಾರಿಗಳು ಸಸಿಗಳನ್ನು ನೆಟ್ಟುನೀರೆರೆದರು.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಸಂಸದರಾದ ಈ.ತುಕಾರಾಂ, ಶಾಸಕರಾದ ಹೆಚ್. ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್ ಮಕ್ಕಳಿಗೆ ಲಸಿಕೆ ಹಾಕಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ , ಜಿಲ್ಲಾ ರಕ್ಷಣಾಧಿಕಾರಿ ಎಸ್.ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande