


ಬಳ್ಳಾರಿ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪೋಷಕರು ತಮ್ಮ ಮಕ್ಕಳ ಭವಿಷ್ಯ ಸಂರಕ್ಷಿಸಲು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆಸ್ಪತ್ರೆಯ 100 ಹಾಸಿಗೆಗಳ ತಾಯಿ ಮತ್ತು ನವಜಾತ ಶಿಶುಗಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ಪ್ರಾರಂಭವಾದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ದೇಶದಾದ್ಯಂತ ನಡೆಯುತ್ತಿದ್ದು, ಕಳೆದ ಹತ್ತು ವಷರ್ಗಳಿಂದ ಪರಿಣಾಮಕಾರಿಯಾಗಿ ಸ್ವ-ಇಚ್ಛೆಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಶ್ರಮ ವಹಿಸಿ ಪಲ್ಸ್ ಪೆÇೀಲಿಯೋ ಪ್ರಕರಣಗಳನ್ನು ತಡೆಯುಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು, ಹುಟ್ಟಿನಿಂದ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಬಹುಮುಖ್ಯವಾಗಿದ್ದು, ಡಿ.21 ರಿಂದ ಡಿ.24 ರವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪೋಷಕರು ತಮ್ಮ ಮಕ್ಕಳನ್ನು ಹಾಗೂ ನೆರೆ-ಹೊರೆಯವರಿಗೂ ಈ ಮಾಹಿತಿ ತಿಳಿಸಿ ಲಸಿಕೆ ಹಾಕಿಸಬೇಕೆಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಅವರು ಮಾತನಾಡಿ, ದೇಶದಲ್ಲಿ ಪ್ರತಿ ವಷ ನಡೆಯುವ ಪೋಲಿಯೋ ಲಸಿಕೆ ಕಾರ್ಯಕ್ರಮ ಅಭಿಯಾನವು 1995 ರಲ್ಲಿ ಪ್ರಾರಂಭಿಸಿ 2014 ರ ವೇಳೆಗೆ ಪೋಲಿಯೋ ಪ್ರಕರಣಗಳನ್ನು ಸಂಪೂರ್ಣ ನಿರ್ಮೂಲನೆ ಮಾಡುವಲ್ಲಿ ನಮ್ಮ ದೇಶವು ಯಶಸ್ವಿಯಾಗಿದೆ. ನೂರು ಕೋಟಿಗಿಂತ ಹೆಚ್ಚಿನ ಜನ ಸಂಖ್ಯೆ ಇರುವ ನಮ್ಮ ದೇಶದಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಸವಾಲಿನ ಕೆಲಸವಾಗಿದ್ದು, ಆರೋಗ್ಯ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿಗಳು ಪೆÇೀಲಿಯೋ ಬಗ್ಗೆ ಜಾಗೃತಿ ಮೂಡಿಸಿ ಕಾರ್ಯ ನಿರ್ವಹಿದ್ದಾರೆ ಎಂದು ಅವರನ್ನು ಅಭಿನಂದಿಸಿದರು.
ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಮಾತನಾಡಿ, ಪ್ರತಿ ವರ್ಷ ಆರೋಗ್ಯ ಇಲಾಖೆಯಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ಏರ್ಪಡಿಸಲಾಗುತ್ತಿದ್ದು, ಪೋಲಿಯೋ ಖಾಯಿಲೆ ನಿರ್ಮೂಲನೆ ಮಾಡಲು ಎರಡು ಹನಿ ಪೋಲಿಯೋ ಲಸಿಕೆ ಅತ್ಯಗತ್ಯವಾಗಿದೆ. ಮಕ್ಕಳಿಗೆ ಬರುವ ವಿವಿಧ ಅಂಗವೈಖಲ್ಯತೆ ಹೋಗಲಾಡಿಸಲು ಜನ ಸಮುದಾಯದವರು 5 ವರ್ಷದ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಹಾಗೂ ವಿವಿಧ ಹಂತದ ವಯಸ್ಸಿನ ಮಕ್ಕಳಿಗೆ ಅವಶ್ಯವಿರುವ ಲಸಿಕೆಗಳನ್ನು ಸಹ ತಪ್ಪದೇ ಹಾಕಿಸಬೇಕು ಎಂದು ತಾಯಂದಿರಲ್ಲಿ ವಿನಂತಿ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಚಿಗುರು ಕಲಾ ತಂಡದ ಎಸ್.ಎನ್ ಹುಲುಗಪ್ಪ ಮತ್ತು ಸಂಗಡಿಗರಿಂದ ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಿದರು.
ಮಹಾನಗರ ಪಾಲಿಕೆಯ ಉಪಮೇಯರ್ ಮೊಬಿನಾ, ಸದಸ್ಯ ಅಶೋಕ್ ಕುಮಾರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝಬೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ.ಎನ್., ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಂ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯರು, ಶೂಶ್ರುಕರು, ಸಿಬ್ಬಂದಿ ಹಾಗೂ ಪೋಷಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್