
ಬೆಂಗಳೂರು, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಒಲಂಪಿಕ್ ಅಸೋಸಿಯೇಶನ್ ವತಿಯಿಂದ ಲೋಕಭವನದಲ್ಲಿ (ರಾಜಭವನ) ಆಯೋಜಿಸಿದ್ದ ಸಮಾರಂಭದಲ್ಲಿ ಕರ್ನಾಟಕ ಒಲಂಪಿಕ್–2025 ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು, ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa