ಸಚಿವರಿಗೆ ಜೀವ ಬೆದರಿಕೆ ; ಆರೋಪಿ ಬಂಧನ
ಗದಗ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಚ್.ಕೆ. ಪಾಟೀಲ್ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ ಪ್ರಕರಣ ಗದಗ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಚಿವರನ್ನು ನಿಲ್ಲಿಸಿ ಎಕೆ–47 ಬಂದೂಕಿನಿಂದ ಗುಂಡಿ
ಫೋಟೋ


ಫೋಟೋ


ಗದಗ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರದ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಚ್.ಕೆ. ಪಾಟೀಲ್ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ ಪ್ರಕರಣ ಗದಗ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಚಿವರನ್ನು ನಿಲ್ಲಿಸಿ ಎಕೆ–47 ಬಂದೂಕಿನಿಂದ ಗುಂಡಿನ ಮಳೆಗರೆಯಬೇಕು ಎಂದು ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.

ರೋಣ ತಾಲೂಕಿನ ಸೂಡಿ ಗ್ರಾಮದ ವೀರಣ್ಣ ಬೀಳಗಿ ಎಂಬಾತ ಡಿಸೆಂಬರ್ 14ರಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ಅತ್ಯಂತ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಮಾಡಿದ್ದಾನೆ. ಸಚಿವ ಎಚ್.ಕೆ. ಪಾಟೀಲ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, “ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ನಿಲ್ಲಿಸಿ ಎಕೆ–47 ನಿಂದ ಗುಂಡಿನ ಮಳೆಗರೆಯಬೇಕು” ಎಂದು ಜೀವ ಬೆದರಿಕೆ ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿತ್ತು.

ಈ ಕುರಿತು ಕಾಂಗ್ರೆಸ್ ಮುಖಂಡ ಬಿ.ಬಿ. ಅಸೂಟಿ ಅವರು ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದರು. ದೂರು ಸ್ವೀಕರಿಸಿದ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಸಾಮಾಜಿಕ ಜಾಲತಾಣದ ಪೋಸ್ಟ್ ಪರಿಶೀಲನೆ ನಡೆಸಿದ ಬಳಿಕ ಆರೋಪಿಯ ಗುರುತು ಪತ್ತೆ ಹಚ್ಚಿ, ರೋಣ ತಾಲೂಕಿನ ಸೂಡಿ ಗ್ರಾಮದಿಂದ ವೀರಣ್ಣ ಬೀಳಗಿಯನ್ನು ಬಂಧಿಸಲಾಗಿದೆ.

ಆರೋಪಿಯ ವಿರುದ್ಧ ಐಪಿಸಿ ಹಾಗೂ ಐಟಿ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸಾರ್ವಜನಿಕ ಶಾಂತಿ ಭಂಗ, ಪ್ರಚೋದನೆ ಹಾಗೂ ಗಣ್ಯ ವ್ಯಕ್ತಿಗೆ ಜೀವ ಬೆದರಿಕೆ ಹಾಕಿದ ಆರೋಪಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಚೋದನಕಾರಿ ಪೋಸ್ಟ್‌ಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ, ಬೆದರಿಕೆ ಹಾಗೂ ಪ್ರಚೋದನಕಾರಿ ಪೋಸ್ಟ್ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳ ವಿರುದ್ಧ ಇಂತಹ ಬೆದರಿಕೆಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದ್ದು, ಕಾನೂನಿನ ಭಯವಿಲ್ಲದೆ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಅಗತ್ಯವೆಂದು ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande