
ಗೋಕಾಕ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಅಂಗ ವೈಫಲ್ಯತೆ ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು.
ಗೋಕಾಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ಜರುಗಿದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಇತರೆ ದೇಶಗಳಲ್ಲಿ ಪೋಲಿಯೋ ಸೋಂಕು ಇರುವುದರಿಂದ ಮಕ್ಕಳ ಹಿತಾಸಕ್ತಿಗಾಗಿ ಸರ್ಕಾರ ಪೋಲಿಯೋ ಅಭಿಯಾನ ನಡೆಸಿಕೊಂಡು ಬರುತ್ತಿದೆ. ದೇಶದಲ್ಲಿ 2011 ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ಕಂಡುಬಂದಿದ್ದು ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 1998 ರಲ್ಲಿ ಕೊನೆಯ ಪ್ರಕರಣ ದೃಡಪಟ್ಟಿದ್ದು ಆ ನಂತರ ಯಾವುದೇ ಪ್ರಕರಣ ಕಂಡುಬಂದಿರುವುದಿಲ್ಲ ಎಂದರು.
ಹತ್ತಿರದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ತಪ್ಪದೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸಬೇಕು.ಅಧಿಕಾರಿಗಳು ಸಕ್ರೀಯವಾಗಿ ಭಾಗವಹಿಸಿ ಸಾರ್ವಜನಿಕರ ಸಹಕಾರದೊಂದಿಗೆ 100% ಸಾಧನೆಗೈಯಲು ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa