ಬಾಲಕರ ಬಾಲ ಮಂದಿರದ ಬಾಲಕ ಕಾಣೆ
ಬಳ್ಳಾರಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ನಗರದ ಕಂಟೋನ್‍ಮೆಂಟ್ ಪ್ರದೇಶದ ಸರ್ಕಾರಿ ಬಾಲಕರ ಬಾಲ ಮಂದಿರದ ಅಪ್ಪು(14) ಡಿ.19 ರಂದು ಬಾಲಕರ ಬಾಲಮಂದಿರದ ಶಾಲೆಗೆ ಹೋಗಿಬರುತ್ತೇನೆ ಎಂದು ಹೋದ ಬಾಲಕ ಮರಳಿ ಬಾರದೇ ಕಾಣೆಯಾಗಿದ್ದು ಪ್ರಕರಣ ದಾಖಲಾಗಿದೆ ಎಂದು ಲ್‍ಬಜಾರ್ ಪೆÇಲೀಸ್ ಠಾಣೆಯ ಪೆÇಲೀಸ್ ಸಬ್
ಬಾಲಕರ ಬಾಲ ಮಂದಿರದ ಬಾಲಕ ಕಾಣೆ


ಬಳ್ಳಾರಿ, 22 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ನಗರದ ಕಂಟೋನ್‍ಮೆಂಟ್ ಪ್ರದೇಶದ ಸರ್ಕಾರಿ ಬಾಲಕರ ಬಾಲ ಮಂದಿರದ ಅಪ್ಪು(14) ಡಿ.19 ರಂದು ಬಾಲಕರ ಬಾಲಮಂದಿರದ ಶಾಲೆಗೆ ಹೋಗಿಬರುತ್ತೇನೆ ಎಂದು ಹೋದ ಬಾಲಕ ಮರಳಿ ಬಾರದೇ ಕಾಣೆಯಾಗಿದ್ದು ಪ್ರಕರಣ ದಾಖಲಾಗಿದೆ ಎಂದು ಲ್‍ಬಜಾರ್ ಪೆÇಲೀಸ್ ಠಾಣೆಯ ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ಅವರು ತಿಳಿಸಿದ್ದಾರೆ.

ಬಾಲಕನ ಚಹರೆ:

ಎತ್ತರ ಅಂದಾಜು 4.9 ಅಡಿ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೇರಳೆ ಬಣ್ಣದ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.

ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಬಾಲಕನ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಕೌಲ್‍ಬಜಾರ್ ಪೆÇಲೀಸ್ ಠಾಣೆಯ ದೂ.08392-240731, 244145, ಪಿ.ಎಸ್.ಐ ಮೊ.94808203085 ಪಿ.ಐ ಮೊ.9480803047 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande