ಭೂಸ್ವಾಧೀನ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ವಿಜಯಪುರ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭೂಸ್ವಾಧೀನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ರೈತರು ಪ್ರತಿಭಟನೆ ನಡೆಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂಸ್ವಾಧೀನ ಪಡಿಸಿಕೊಂಡ ಜಮೀನುಗಳ ರೈತರಿಗೆ ಪರಿಹಾರ ಒದಗಿಸಲು ವಿಜಯಪುರ ಜಿಲ್ಲೆಯ ಬಸವನಬ
ಪ್ರತಿಭಟನೆ


ವಿಜಯಪುರ, 22 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭೂಸ್ವಾಧೀನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ರೈತರು ಪ್ರತಿಭಟನೆ ನಡೆಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂಸ್ವಾಧೀನ ಪಡಿಸಿಕೊಂಡ ಜಮೀನುಗಳ ರೈತರಿಗೆ ಪರಿಹಾರ ಒದಗಿಸಲು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕುದರಿಸಾಲವಾಡಗಿ ಗ್ರಾಮದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

2016ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭೂಸ್ವಾಧೀನ ಕಾಯ್ದೆ ಜಾರಿಗೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ 100% ಸೊಲ್ಯಾಶಿಯಮ್, 15% ಬಡ್ಡಿ ಪ್ರತಿ ತಿಂಗಳಿಗೆ ಕೊಡಬೇಕಂತ ಕಾನೂನು ಮಾಡಿದ್ದು, 10 ವರ್ಷಗಳಿಂದ ಯಾವುದೇ ಪರಿಹಾರ ಹಣ ನೀಡಿಲ್ಲ. ಇದರಿಂದ ರೈತರು ಜೀವನ ನಡೆಸಲು ತೊಂದರೆ ಆಗುತ್ತಿದೆ. ಅದಕ್ಕಾಗಿ ನ್ಯಾಯಾಲಯದ ಆದೇಶದಂತೆ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande