
ಬಳ್ಳಾರಿ, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಡಿಸೆಂಬರ್ 24 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಡಿ.24 ರಂದು ಬೆಳಿಗ್ಗೆ ಬೆಂಗಳೂರಿನ ಹೆಚ್‍ಎಎಲ್‍ನ ಏರ್‍ಪೆÇೀರ್ಟ್ ನಿಂದ ವಿಶೇಷ ವಿಮಾನ ಮೂಲಕ ಹೊರಟು, ಬೆಳಿಗ್ಗೆ 11.45 ಕ್ಕೆ ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಏಲಿಪ್ಯಾಡ್ ಗೆ ತಲುಪಿ, ಕಿಷ್ಕಿಂದ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಆಗಮಿಸುವರು.
ನಂತರ ಮಧ್ಯಾಹ್ನ 12.30 ಗಂಟೆಗೆ ಸಿರುಗುಪ್ಪ ರಸ್ತೆ ಮಾರ್ಗದ ಸಿಂಧಿಗೇರಿ ಗ್ರಾಮದ ಬಳಿಯ ಮೌಂಟ್ ಕ್ಯಾಂಪಸ್ ನ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಅಲ್ಲಿಂದ ಮಧ್ಯಾಹ್ನ 02.30 ಗಂಟೆಗೆ ಹೊರಟು, ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಲೋಕಭವನಕ್ಕೆ ಪ್ರಯಾಣಿಸುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್