ರೇಲ್ವೆ ಪ್ರಯಾಣ ದರ ಹೆಚ್ವಳ ಸಮರ್ಥಿಸಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರೈಲ್ವೆ ಟಿಕೆಟ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಿಲೋ ಮೀಟರ್‌ಗೆ ಕೇವಲ ಒಂದು ಪೈಸೆ ಮಾತ್ರ ಹೆಚ್ಚಳ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾನು
Joshi


ಹುಬ್ಬಳ್ಳಿ, 22 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರೈಲ್ವೆ ಟಿಕೆಟ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಿಲೋ ಮೀಟರ್‌ಗೆ ಕೇವಲ ಒಂದು ಪೈಸೆ ಮಾತ್ರ ಹೆಚ್ಚಳ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದಲ್ಲಿದ್ದಾಗ ರೈಲ್ವೆ ಪ್ರಯಾಣ ದರ ಹೆಚ್ಚಳದ ವಿರುದ್ಧ ಲೋಕಸಭೆಯಲ್ಲಿ ಮಾತನಾಡಿದ್ದೆ. ಅಂದಿನ ಪರಿಸ್ಥಿತಿ ಭಿನ್ನವಾಗಿತ್ತು, ಆದರೆ ಈಗಿನ ಸರ್ಕಾರ ಜನರ ಮೇಲೆ ಅನಗತ್ಯ ಹೊರೆ ಹಾಕಿಲ್ಲ. ಕೇವಲ ಒಂದು ಪೈಸೆಯಷ್ಟು ಮಾತ್ರ ದರ ಹೆಚ್ಚಳವಾಗಿದೆ ಎಂದು ಹೇಳಿದರು.

ಸ್ಥಳೀಯ ಬಸ್‌ಗಳ ದರ ಹೆಚ್ಚಳದ ಹೋಲಿಕೆಯಲ್ಲಿ ರೈಲ್ವೆ ದರ ಏರಿಕೆ ಅತಿ ಕಡಿಮೆಯಾಗಿದೆ. ಬಡವರು ಹಾಗೂ ಸಾಮಾನ್ಯ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಬಾರದು ಎಂಬ ಉದ್ದೇಶದಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೋಶಿ ಹೇಳಿದರು.

ಜನರ ಅಪೇಕ್ಷೆಯಂತೆ ಹೆಚ್ಚು ರೈಲು ಸೇವೆ, ಸ್ವಚ್ಛತೆ ಹಾಗೂ ಸೌಲಭ್ಯಗಳ ಮೇಲೂ ಸರ್ಕಾರ ಗಮನ ಹರಿಸಿದೆ. ಎಲ್ಲ ಪ್ರಯಾಣಿಕರಿಗೂ ರೈಲ್ವೆಯಿಂದ ಸಬ್ಸಿಡಿ ನೀಡಲಾಗುತ್ತಿದೆ. ಇದನ್ನು ರಾಜಕೀಯ ಸಾಧನವಾಗಿ ಬಳಸಬಾರದು ಎಂದು ಜೋಶಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande