
ಬಳ್ಳಾರಿ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಯುಸಿ ಹೊರತುಪಡಿಸಿ ಉಳಿದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಮತ್ತು ಶುಲ್ಕ ಮರುಪಾವತಿ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜ.31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್