
ಬಳ್ಳಾರಿ, 24 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಎ.ಪಿ.ಎಂ.ಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದಲ್ಲಿ ಲಾರಿ ಕ್ಲಿನರ್ ಆಗಿ ಕೆಲಸ ಮಾಡುತ್ತಿದ್ದ ಮಹಾರಾಷ್ಟ್ರದ ಗೋಕುಲ್ ರಾಮ್‍ದಾಸ್ ಜಾಧವ್(36) ಕಾಣೆಯಾಗಿದ್ದು ಪ್ರಕರಣ ದಾಖಲಾಗಿದೆ ಎಂದು ಎಪಿಎಂಸಿ ಯಾರ್ಡ್ ಪೊಲೀಸ್ oÁuÉAiÀÄ ಸಬ್ ಇನ್ಸ್ ಪೆಕ್ಟರ್ ಅವರು ತಿಳಿಸಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ ಅಂದಾಜು 5.5 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡ ಕುತ್ತಿಗೆಯ ಮೇಲೆ ಹಳೆಯ ಗಾಯದ ಗುರುತು ಹಾಗೂ ಗಡ್ಡ ಬಿಟ್ಟಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಬ್ರೌನ್ ಬಣ್ಣದ ಪುಲ್ ಶರ್ಟ್, ಸಾಧಾರಣ ಕೆಂಪು ಬಣ್ಣದ ರೆಡಿಮೆಡ್ ಪುಲ್ ಡ್ರಾಯರ್ ಧರಿಸಿರುತ್ತಾನೆ. ಮರಾಠಿ, ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.948080396 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್