ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಡಿಸಿ
ವಿಜಯಪುರ, 24 ಡಿಸೆಂಬರ್ (ಹಿ.ಸ.); ಆ್ಯಂಕರ್: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇಲೆ ತ್ವರಿತವಾಗಿ ಇತಥ್ಯಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲ
ಡಿಸಿ


ವಿಜಯಪುರ, 24 ಡಿಸೆಂಬರ್ (ಹಿ.ಸ.);

ಆ್ಯಂಕರ್: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇಲೆ ತ್ವರಿತವಾಗಿ ಇತಥ್ಯಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ತರಿಗೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ನಿಯಮಾನುಸಾರ ಹಾಗೂ ಪ್ರಕರಣಾನುಸಾರ ಕಾಲಮಿತಿಯೊಳಗೆ ಪರಿಹಾರ ಧನ ಒದಗಿಸಬೇಕು. ಯಾವುದೇ ಬಾಕಿ ಉಳಿಸಿಕೊಳ್ಳದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ನಿಗಮಗಳು ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳಲ್ಲಿರುವ ದಾಖಲೆಗಳೊಂದಿಗೆ ಸರಿ ಹೊಂದಿಸಿಕೊಂಡು, ನಿಯಮಾನುಸಾರ ಕ್ರಮವಹಿಸಿ,ಅಧಿಕಾರಿಗಳು ಸಮನ್ವಯ ಸಾಧಿಸಿ, ಆದ್ಯತೆಯ ಮೇಲೆ ಕ್ರಮವಹಿಸಲು ಅವರು ಸೂಚನೆ ನೀಡಿದರು.

ಸರ್ಕಾರ ನೀಡಿರುವ ಸೌಲಭ್ಯ ಎಸ್ ಎಸ್ಟಿ ಜನರಿಗೆ ತಲುಪಿಸುವ ಜವಾಬ್ದಾರಿಯಾಗಿದೆ. ಎಸ್ಸಿ ಕಾಲೋನಿಗಳಲ್ಲಿ ಸಮರ್ಪಕ ನೀರು ಪೂರೈಸುವಂತೆ ಅಭಿμÉೀಕ ಚಕ್ರವರ್ತಿ ಅವರ ಮನವಿ ಸ್ಪಂದಿಸಿ, ಜಿಲ್ಲಾಧಿಕಾರಿಗಳು ಮಾತನಾಡಿ, ಜಲಜೀವನ ಮಿಷನ್ ಯೋಜನೆಯ ಟೆಂಡರ್ ಅನುಮೋದಿಸಿದಂತೆ, ಕಾಮಗಾರಿಯ ಅಂದಾಜು ಪತ್ರಿಕೆಯ ವಿತರಣಾ ವ್ಯವಸ್ಥೆ ವಿನ್ಯಾಸದನ್ವಯ ಕಾಮಗಾರಿ ಅನುμÁ್ಠನಗೊಳಿಸುವ ಒಂದು ವಾರದಲ್ಲಿ ಸರಿ ಮಾಡಿ ವರದಿ ಸಲ್ಲಿಸಿ ಎಂದು ಸಂಬಂಧಿಸಿದ ತಾಲೂಕ ಪಂಚಾಯತಿ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಇರುವ ಸಾಲ-ಸೌಲಭ್ಯವನ್ನು ಒದಗಿಸಲು ಕ್ರಮ ವಹಿಸಬೇಕು. ಕೆಲ ಯೋಜನೆಗಳಲ್ಲಿ ಬ್ಯಾಂಕಿನಲ್ಲಿರುವ ತಾಂತ್ರಿಕ ಸಮಸ್ಯೆಗಳಿದ್ದು, ಅವುಗಳನ್ನು ನಿವಾರಿಸಿಕೊಂಡು, ಅರ್ಹರಿಗೆ ಯೋಜನೆ ಲಾಭ ದೊರಕಿಸಿಕೊಡಿ, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಬ್ಯಾಂಕಿನವರೊಂದಿಗೆ ಸಭೆ ನಡೆಸಿ, ಸಮಸ್ಯೆ ಇತ್ಯರ್ಥಪಡಿಸಿ ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸ್ಮಶಾನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸದಸ್ಯರು ಕೋರಿದ ಮಾಹಿತಿಗೆ ಒತ್ತುವರಿಯಾಗದಂತೆ ನೋಡಿಕೊಂಡು ಗ್ರಾಮ ಪಂಚಾಯತಿ ಮೂಲಕ ಅಭಿವೃದ್ಧಿಗೆ ಕ್ರಮವಹಿಸಬೇಕು. ಡಿಜಿಟಲ್ ಮಾದರಿಯಲ್ಲಿ ಜನನ ಪ್ರಮಾಣ ಪತ್ರ ನೀಡುವುದಕ್ಕೆ ಸಂಬಂದಿಸಿದಂತೆ, ಇ-ಜನ್ಮ ತಂತ್ರಾಂಶದಲ್ಲಿ ಪರಿಶೀಲನೆ ನಡೆಸಲು ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿಗಳು ಕ್ರಮವಹಿಸಿ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿ ಸೂಚಿಸಿದರು.

ಅಸ್ಪಶ್ಯತಾ ನಿವಾರಣಾ ಜಾಗೃತಿ ಸಭೆಗಳನ್ನು ಕಾಲಕಾಲಕ್ಕೆ ಆಯೋಜಿಸುವ ಮೂಲಕ ಜಾಗೃತಿ ಮೂಡಿಸುವಂತೆ ಅಭಿμÉೀಕ ಚಕ್ರವರ್ತಿ ಸಭೆಗೆ ತಿಳಿಸಿದರು.

ವಸತಿ ಶಾಲೆಗಳಲ್ಲೂ ನಿರಂತರ ಪಾಲಕರ ಸಭೆ ಏರ್ಪಡಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬ ಮಾಡದೇ ಪರಿಹಾರ ಒದಗಿಸಬೇಕು. ವಸತಿ ನಿಲಯಗಳ ಹತ್ತಿರ ಮದ್ಯ ಮಾರಾಟ ಕಡಿವಾಣ ಹಾಕುವಂತೆ ಸದಸ್ಯರು ಮನವಿ ಮಾಡಿಕೊಡರು.

ಎಸ್ಸಿ-ಎಸ್ಟಿ ಕಾಯ್ದೆಯಡಿ ಜಿಲ್ಲೆಯಲ್ಲಿ ಕಳೆದ ಜನವರಿ 2025 ರಿಂದ ನವೆಂಬರ್-2025ರವರೆಗೆ ದಾಖಲಾದ 92 ಪ್ರಕರಣಗಳ ಪೈಕಿ 7 ಸುಳ್ಳು ವರದಿಯಾದ ಪ್ರಕರಣಗಳಾಗಿದ್ದು,65 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು,02 ಪ್ರಕರಣಗಳು ತನಿಖೆಯಲ್ಲಿವೆ.16 ಪ್ರಕರಣಗಳು ವರ್ಗಾವಣೆ ಪ್ರಕರಣಗಳಾಗಿವೆ.02 ಕೈಬಿಟ್ಟ ಪ್ರಕರಣಗಳಾಗಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಬಾಗೇವಾಡಿ ಡಿವೈ ಎಸ್ ಪಿ ಬಲ್ಲಪ್ಪ ನಂದಗಾವಿ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ್, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೆÇೀತದಾರ, ಸರ್ಕಾರಿ ಅಭಿಯೋಜಕರಾದ ಎಚ್.ಜಿ.ಮುಲ್ಲಾ,ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳಾದ ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಲ್ಲು ತಳವಾರ, ಮದನಕುಮಾರ ನಾಗರದಿನ್ನಿ, ಮಹಾಂತೇಶ ಸಾಸಬಾಳ, ರಾಜಶೇಖರ ಚೌರ, ನಾನು ಸೋಮು ಲಮಾಣಿ, ರವಿಕಾಂತ ಬಿರಾದಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande