
ಹೊಸಪೇಟೆ, 24 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಮತಕ್ಷೇತ್ರಗಳಿಂದ ಪ್ರತ್ಯೇಕವಾಗಿ ಸದಸ್ಯರ ಆಯ್ಕೆ ಕುರಿತು ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ ಹೇಳಿದರು.
ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದನ್ವಯ ಜಿಲ್ಲಾ ಯೋಜನಾ ಸಮಿತಿ ರಚಿಸಬೇಕಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‍ನ ಚುನಾಯಿತ ಸದಸ್ಯರುಗಳ ಒಟ್ಟು 11 ಸದಸ್ಯರು ಆಯ್ಕೆ ಮಾಡಲಾಗುವುದು. ಜಿಲ್ಲಾ ಪಂಚಾಯತ್‍ನ ವಿಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ನಾಮಪತ್ರಗಳನ್ನು ಸ್ವೀಕರಿಸಲು ಡಿ.30 ರಿಂದ ಜ.6 ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಜ.7 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ.
ಜ.8 ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಜ.14 ರಂದು ಮತದಾನ ಅಗತ್ಯವಿದ್ದಲ್ಲಿ ಜ.14 ರಂದು ಜಿಲ್ಲಾ ಪಂಚಾಯತ್‍ನ ವಿಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ನಡೆಸಲಾಗುತ್ತದೆ. ಅಂದೇ ಮತ ಎಣಿಕೆ ಕಾರ್ಯ ನಡೆಯಲಿದೆ. ಒಟ್ಟಾರೆ ಜ.16 ರೊಳಗೆ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್