
ಬಳ್ಳಾರಿ, 24 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಬಿಸಿಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಡಿ.27 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಬ್ಯಾಂಕ್-1 ಫೀಡರ್‍ನ ಎಫ್-63 ಮತ್ತು ಎಫ್-64 ಫೀಡರ್ ವ್ಯಾಪ್ತಿಯ ರೂಪನಗುಡಿ ರಸ್ತೆ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್