
ಗದಗ, 24 ಡಿಸೆಂಬರ್ (ಹಿ.ಸ.)
ಆ್ಯಂಕರ್:
ಗದಗ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಮುಖಂಡರಾದ ವೀರನಗೌಡ ನಾಡಗೌಡ್ರು ಇಂದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಬೆಂಗಳೂರಿನ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷರಾದ ಕೃಷ್ಣಾರೆಡ್ಡಿ, ಗದಗ ಜಿಲ್ಲಾ ಉಸ್ತುವಾರಿಗಳಾದ ಸೋಮನಗೌಡ ಪಾಟೀಲ ಮನಗೂಳಿ, ಜೆಡಿಎಸ್ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರಾಧಾ ತಿಪ್ಪೇಸ್ವಾಮಿಯವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ವೀರನಗೌಡ ನಾಡಗೌಡರಿಗೆ ಹಾಗೂ ಹಳ್ಳಿಕೇರಿ ಗ್ರಾಮದ ಮಾಜಿ ಸದ್ಯಸರಾಧ ವೀರುಪಾಕ್ಸಯ್ಯ ಹಿರೇಮಠ ರವರಿಗೆ ಪಕ್ಷದ ಶಾಲ್ ಹೊದಿಸುವುದರ ಮುಖಾಂತರ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಪಕ್ಷದ ರಾಜ್ಯಾಧ್ಯಕ್ಷರು ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ದೂರವಾಣಿ ಮುಖಾಂತರ ಮಾತನಾಡಿ ವೀರನಗೌಡ ನಾಡಗೌಡರವನ್ನು ಪಕ್ಷಕ್ಕೆ ಸ್ವಾಗತಿಸಿದರು ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ವಕ್ತರ ವೆಂಕನಗೌಡ ಆರ್ ಗೋವಿಂದಗೌಡ್ರ, ಸಿದ್ದಯ್ಯ ಹೊಂಬಾಳಿಮಠ, ಜಿ.ಕೆ ಕಳ್ಳಿಮಠ, ಪ್ರಫುಲ್ಲ ಕುಮಾರ ಪುಣೆಕರ, ಸುಭಾಷ್ ದಾನರೆಡ್ಡಿ ಉಪಸ್ಥಿತರಿದ್ದ ಪಕ್ಷದ ಮುಖಂಡರಾಗಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP