
ವಿಜಯಪುರ, 24 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಳಗಾವಿಯ ಸವದತ್ತಿಯ ಶ್ರೀ ಯಲ್ಲಮ್ಮದೇವಿ ಜಾತ್ರೆ ಹಾಗೂ ಬಾಗಲಕೋಟೆಯ ಬಾದಾಮಿ ಶ್ರೀ ಬನಶಂಕರಿದೇವಿ ಜಾತ್ರೆಯ ನಿಮಿತ್ತ ದಿನಾಂಕ 30-12-2025 ರಿಂದ 06-01-2025ರವರೆಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದ ವತಿಯಿಂದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ವಿಜಯಪುರ ಕೇಂದ್ರ ಬಸ್ ನಿಲ್ದಾಣ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ಹಾಗೂ ನಿಡಗುಂದಿ ಬಸ್ ನಿಲ್ದಾಣಗಳಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿದ್ದು, ಯಾತ್ರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದ ದೂರವಾಣಿ ಸಂಖ್ಯೆ- 08352-251344, ಕೇಂದ್ರ ಬಸ್ ನಿಲ್ದಾಣಾಧಿಕಾರಿ ಅವರ ಮೊಬೈಲ್ ಸಂಖ್ಯೆ- 7760992258,ವಿಜಯಪುರ ಘಟಕ-1ರ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ- 7760992263, ವಿಜಯಪುರ ಘಟಕ-2ರ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ- 7760992264, ಇಂಡಿ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ- 7760992265, ಸಿಂದಗಿ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ- 7760992266, ಮುದ್ದೇಬಿಹಾಳ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ- 7760992267, ತಾಳಿಕೋಟೆ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ- 7760992268, ಬಸವನ ಬಾಗೇವಾಡಿ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ- 7760992269 ಸಂಪರ್ಕಿಬಹುದಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande