ಮಕ್ಕಳ ಕಾನೂನುಗಳ ಸಮರ್ಪಕ ಅನುಷ್ಠಾನಕ್ಕೆ: ನ್ಯಾ. ದಾಕ್ಷಾಯಿಣಿ ಬಿ.ಕೆ ಕರೆ
ಹಾಸನ, 24 ಡಿಸೆಂಬರ್ (ಹಿ.ಸ.); ಆ್ಯಂಕರ್: ಪೊಲೀಸ್ ಅಧಿಕಾರಿಗಳು ಮಕ್ಕಳ ಕಾನೂನುಗಳನ್ನು ಸರಿಯಾದ ಸ್ವರೂಪದಲ್ಲಿ ಅರ್ಥ ಮಾಡಿಕೊಂಡು ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಹಾಸನ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ದಾಕ್ಷ
Conference


ಹಾಸನ, 24 ಡಿಸೆಂಬರ್ (ಹಿ.ಸ.);

ಆ್ಯಂಕರ್:

ಪೊಲೀಸ್ ಅಧಿಕಾರಿಗಳು ಮಕ್ಕಳ ಕಾನೂನುಗಳನ್ನು ಸರಿಯಾದ ಸ್ವರೂಪದಲ್ಲಿ ಅರ್ಥ ಮಾಡಿಕೊಂಡು ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಹಾಸನ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ದಾಕ್ಷಾಯಿಣಿ ಬಿ.ಕೆ ತಿಳಿಸಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯೂತ್ ಹಾಸ್ಟೆಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಿದ್ದ ಬಾಲ್ಯವಿವಾಹ ನಿಷೇಧ, ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳನ್ನು ಹೆಚ್ಚು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಅವರ ಯೋಗ್ಯತೆ, ಅಸಾಯಕತೆಯನ್ನು ಸಮಾಜದ ದುಷ್ಟ ಶಕ್ತಿಗಳು ದುರ್ಬಳಿಕೆ ಮಾಡಿಕೊಂಡು ಅವರಿಂದ ತಪ್ಪುಗಳನ್ನು ಮಾಡಿಸುವುದು, ಮಕ್ಕಳ ಹಕ್ಕುಗಳ ಉಲ್ಲಂಘನೆ ಮಕ್ಕಳ ಮೇಲೆ ದೈಹಿಕ, ಲೈಂಗಿಕ ಸ್ವರೂಪದ ಹಿಂಸೆಗಳು, ದೌರ್ಜನ್ಯಗಳನ್ನು ಎಸಗುತ್ತಿದ್ದಾರೆ ಇದನ್ನು ತಡೆಯಬೇಕು ಎಂದರು.

ಹಾಸನ ಜಿಲ್ಲೆ ಬಾಲ್ಯವಿವಾಹ ಪ್ರಕರಣಗಳಲ್ಲಿ 4ನೇ ಸ್ಥಾನದಲ್ಲಿದೆ ಇದು ನಮಗೆ ತುಂಬ ಅವಮಾನಕರ ಸಂಗತಿಯಾಗಿದೆ, ಆದ್ದರಿಂದ ಪೊಲೀಸ್ ಠಾಣೆಯ ಅಧಿಕಾರಿಗಳು ಬಾಲ್ಯವಿವಾಹ ತಪ್ಪಿಗೆ ಆರಂಭದಲ್ಲಿ ಅರಿವು ಮೂಡಿಸಲು ಕಾರ್ಯನಿರ್ವಹಿಸಬೇಕಿದೆ, ಒಂದು ವೇಳೆ ವಿವಾಹಗಳು ನಡೆದಿರುವುದು ಕಂಡುಬಂದರೆ ತಕ್ಷಣ ಕಾನೂನು ಕ್ರಮ ತೆಗೆದುಕೊಂಡು ಅಂತಹ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯದಂತೆ ತಡೆಯಬಹುದಾಗಿದೆ ಇದರಿಂದ ಹೆಣ್ಣು ಮಕ್ಕಳು ಬಾಲ ಗರ್ಭಿಣಿಯಾಗುವುದನ್ನು ತಡೆಯಬಹುದು ಎಲ್ಲಾ ಅಧಿಕಾರಿಗಳು ಬಾಲ್ಯವಿವಾಹ ತಡೆಯಲು ಕ್ರಮವಹಿಸಬೇಕಾಗಿದೆ ಎಂದು ತಿಳಿಸಿದರು.

ಬಾಲ್ಯವಿವಾಹ ನಿಷೇಧ ಕರ್ನಾಟಕ ತಿದ್ದುಪಡಿ ಕಾಯ್ದೆಯನ್ವಯ ಪೊಲೀಸ್ ಅಧಿಕಾರಿಗಳಿಗೆ ಸುಮೊಟೊ ಪ್ರಕರಣ ದಾಖಲಿಸಲು ಅವಕಾಶ ನೀಡಿದ್ದು ಅದನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande