
ಹೊಸಪೇಟೆ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣವಧಿ ಪಿಹೆಚ್‌ಡಿ ಅಧ್ಯಯನ(ಫೆಬ್ರವರಿ.10) ರಿಂದ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಶಶಿಕಲಾ ತಿಳಿಸಿದ್ದಾರೆ.
ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್ ಲೈನ್ ಮೂಲಕ ಅರ್ಜಿ ಜನವರಿ.9 ರೊಳಗೆ ಸಲ್ಲಿಸಬಹುದು. ಅರ್ಜಿಯ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಯನ್ನು ವೆಬ್ ಸೈಟ್
https://bcwd.karnataka.gov.in ನಲ್ಲಿ ತಿಳಿದುಕೊಳ್ಳಬಹುದು ಅಥವಾ ದೂರವಾಣಿ ಸಂಖ್ಯೆ. 8050770004 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್