ವಾಜಪೇಯಿ ಜನ್ಮ ವಾರ್ಷಿಕೋತ್ಸವ ; ರಾಷ್ಟ್ರ ನಾಯಕರಿಂದ ಪುಷ್ಪ ನಮನ
ನವದೆಹಲಿ, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಇಂದು ಬೆಳಿಗ್ಗೆ ನವದೆಹ
Vajpayee birth-anniversary


ನವದೆಹಲಿ, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಇಂದು ಬೆಳಿಗ್ಗೆ ನವದೆಹಲಿಯ ವಿಜಯ್ ಘಾಟ್‌ನಲ್ಲಿರುವ ‘ಸದೈವ್ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ನಿತಿನ್ ನವೀನ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಹಲವು ಕೇಂದ್ರ ಮತ್ತು ರಾಜ್ಯ ನಾಯಕರು ಹಾಜರಾಗಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಈ ಸಂದರ್ಭದಲ್ಲಿ ಮಾತನಾಡಿ, “ಅಟಲ್ ಬಿಹಾರಿ ವಾಜಪೇಯಿ ಒಬ್ಬ ಶ್ರೇಷ್ಠ ರಾಜಕಾರಣಿ ಮಾತ್ರವಲ್ಲ, ಕವಿ ಹಾಗೂ ರಾಷ್ಟ್ರೀಯ ಏಕತೆಯ ಸಂಕೇತವಾಗಿದ್ದರು. ಅವರ ಚಿಂತನೆಗಳು ಮತ್ತು ದೃಷ್ಟಿಕೋನಗಳು ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸಿವೆ. ಸಂವಾದ, ಘನತೆ ಮತ್ತು ಸಮರ್ಪಣೆಯ ಮೂಲಕ ಸಾಮಾಜಿಕ ಬದಲಾವಣೆಗೆ ದಿಕ್ಕು ನೀಡಿದ ಅವರ ಪರಂಪರೆ ಅಳಿಸಲಾರದದ್ದು” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಪ್ರಕಟಿಸಿ, “ಅಟಲ್ ಬಿಹಾರಿ ವಾಜಪೇಯಿ ಅವರು ಉತ್ತಮ ಆಡಳಿತ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಸಂಪೂರ್ಣ ಜೀವನವನ್ನೇ ಸಮರ್ಪಿಸಿದರು. ಶಕ್ತಿಶಾಲಿ ವಾಗ್ಮಿತ್ವ ಮತ್ತು ಕಾವ್ಯಪ್ರತಿಭೆಯುಳ್ಳ ನಾಯಕನಾಗಿ ಅವರು ದೇಶದ ಸರ್ವತೋಮುಖ ಅಭಿವೃದ್ಧಿಗೆ ದೃಢ ದಾರಿ ಹಾಕಿದರು” ಎಂದು ಸ್ಮರಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸಂದೇಶದಲ್ಲಿ, “ಬಿಜೆಪಿಯನ್ನು ಸ್ಥಾಪಿಸುವ ಮೂಲಕ ಅಟಲ್ ಜೀ ರಾಷ್ಟ್ರೀಯ ಹಿತಾಸಕ್ತಿ ಹಾಗೂ ಸಾಂಸ್ಕೃತಿಕ ರಾಷ್ಟ್ರತತ್ತ್ವಕ್ಕೆ ಆದ್ಯತೆ ನೀಡುವ ಪರ್ಯಾಯ ರಾಜಕೀಯ ಧಾರೆಯನ್ನು ರೂಪಿಸಿದರು. ಅವರ ನಾಯಕತ್ವದಲ್ಲಿ ಎನ್‌ಡಿಎ ಸರ್ಕಾರವು ಪರಂಪರೆ ಮತ್ತು ವಿಜ್ಞಾನವನ್ನು ಸಂಯೋಜಿಸಿದ ಆಡಳಿತ ಮಾದರಿಯನ್ನು ನೀಡಿತು. ಪರಮಾಣು ಶಕ್ತಿಯ ಭಾರತವು ಅವರ ದೃಢ ನಿರ್ಧಾರಗಳ ಫಲ” ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ನಿತಿನ್ ನವೀನ್ ಅವರು, “ಅಟಲ್ ಬಿಹಾರಿ ವಾಜಪೇಯಿ ಮೌಲ್ಯಾಧಾರಿತ ರಾಜಕೀಯ ಮತ್ತು ಸೈದ್ಧಾಂತಿಕ ಬದ್ಧತೆಯ ಆಧಾರಸ್ತಂಭವಾಗಿದ್ದರು. ಪ್ರಜಾಪ್ರಭುತ್ವದಲ್ಲಿ ಸಂವಾದದ ಸಂಸ್ಕೃತಿಯನ್ನು ಬೇರೂರಿಸಿ ಸಾರ್ವಜನಿಕ ಸೇವೆಯನ್ನು ಆದರ್ಶವಾಗಿಸಿದ ಅವರ ಜೀವನ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಶ್ವತ ಸ್ಫೂರ್ತಿಯಾಗಿದೆ” ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande