ಚಿತ್ರದುರ್ಗ ಅಪಘಾತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಬೆಂಗಳೂರು, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷ
Accident cm condolences


ಬೆಂಗಳೂರು, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸಂದೇಶ ಹಂಚಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande