ಚಿತ್ರದುರ್ಗ ಬಸ್ ಬೆಂಕಿ ಅವಘಡ ; ರಾಷ್ಟ್ರಪತಿ, ಗಣ್ಯರ ಸಂತಾಪ
ಬೆಂಗಳೂರು, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಸಂಭವಿಸಿದ ಭೀಕರ ಬಸ್ ಬೆಂಕಿ ಅವಘಡ ದೇಶವನ್ನೇ ಕಂಗೆಡಿಸಿದೆ. ಈ ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ರಾಷ್ಟ್ರಪತಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ನಾಯಕ
President


ಬೆಂಗಳೂರು, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಸಂಭವಿಸಿದ ಭೀಕರ ಬಸ್ ಬೆಂಕಿ ಅವಘಡ ದೇಶವನ್ನೇ ಕಂಗೆಡಿಸಿದೆ. ಈ ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ರಾಷ್ಟ್ರಪತಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿ, ಕರ್ನಾಟಕದ ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಬಸ್ ಬೆಂಕಿ ಅವಘಡದಿಂದ ತೀವ್ರ ನೋವುಂಟಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಚಿತ್ರದುರ್ಗದ ಬಳಿಯ ಹಿರಿಯೂರಿನ ಜವನಗೊಂಡಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಬಸ್ ಬೆಂಕಿಗಾಹುತಿಯಾಗಿ 9 ಜನ ಜೀವ ಕಳೆದುಕೊಂಡಿರುವ ಸುದ್ದಿ ತೀವ್ರ ಆಘಾತ ತಂದಿದೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ,” ಎಂದು ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಚಿತ್ರದುರ್ಗದ ಸಮೀಪ ಖಾಸಗಿ ಬಸ್ ಅಪಘಾತಕ್ಕೆ ತುತ್ತಾಗಿ ಬೆಂಕಿ ಹೊತ್ತಿ ಉರಿದು ಹಲವರು ಧಾರುಣವಾಗಿ ಸಾವನ್ನಪ್ಪಿರುವುದು ಅತ್ಯಂತ ನೋವು ತಂದಿದೆ. ಇನ್ನಷ್ಟು ಸಾವು-ನೋವು ಸಂಭವಿಸದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳ ಚಿಕಿತ್ಸೆಗೆ ರಾಜ್ಯ ಸರ್ಕಾರ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಿ,” ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಸಂಭವಿಸಿದ ಅಪಘಾತದಲ್ಲಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತೀವ್ರ ಆಘಾತ ಉಂಟುಮಾಡಿದೆ. ಮೃತರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಇಂತಹ ದುರಂತಗಳು ಮರುಕಳಿಸದಿರಲಿ,” ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಚಿತ್ರದುರ್ಗದ ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದು ಹಲವರು ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಅತೀವ ದುಃಖ ತಂದಿದೆ. ಈ ಭೀಕರ ದುರಂತದಲ್ಲಿ ಅಗಲಿದವರಿಗೆ ದೇವರು ಸದ್ಗತಿ ಕರುಣಿಸಲಿ. ಗಾಯಾಳುಗಳು ಶೀಘ್ರವಾಗಿ ಪೂರ್ಣ ಗುಣಮುಖರಾಗಲಿ. ಮೃತರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು,” ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande