ಚಿತ್ರದುರ್ಗ ಬಸ್ ದುರಂತ ; ಆರ್.ಅಶೋಕ ಸಂತಾಪ
ಬೆಂಗಳೂರು, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಹಿರಿಯೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಸಜೀವ ದಹನಗೊಂಡಿರುವುದು ತಿಳಿದು ತೀವ್ರ ಆಘಾತವಾಗಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಆತ್ಮಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶ
Accident ashok condolences


ಬೆಂಗಳೂರು, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಹಿರಿಯೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಸಜೀವ ದಹನಗೊಂಡಿರುವುದು ತಿಳಿದು ತೀವ್ರ ಆಘಾತವಾಗಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಆತ್ಮಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದ್ದಾರೆ.

ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಪ್ರಾರ್ಥಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande