
ಹುಬ್ಬಳ್ಳಿ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಲೋಕ ಸಭಾ ಕ್ಷೇತ್ರದ ಧಾರವಾಡ ಸಂಸದ್ ಕ್ರೀಡಾ ಮಹೋತ್ಸವ ಕುಂದಗೋಳದಿಂದ ಚಾಲನೆಗೊಂಡಿತು. ಇದರೊಂದಿಗೆ ಕುಂದಗೋಳ ವಿಧಾನ ಸಭಾ ಕ್ಷೇತ್ರದ ಕ್ರೀಡಾ ಮಹೋತ್ಸವವು ಆರಂಭಗೊಂಡಿತು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯುವಕರಲ್ಲಿ ಕ್ರೀಡಾ ಮನೋಭಾವವನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಮತ್ತು ನಗರ ಭಾಗದ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಹಾಗೂ ಪ್ರತಿಭೆಗಳನ್ನು ಗುರುತಿಸುವ ದೃಷ್ಟಿಯಿಂದ ಈ ಕ್ರೀಡಾ ಮಹೋತ್ಸವವನ್ನು ಆಯೋಜಿಸುತ್ತಿದೆ.
ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪುಷ್ಪನಮನ ಸಲ್ಲಿಸಿ, 'ಧಾರವಾಡ ಸಂಸದ್ ಕ್ರೀಡಾ ಮಹೋತ್ಸವ 2025' ಉದ್ಘಾಟನೆಯ ಸಮಾರಂಭದಲ್ಲಿ ಶಾಸಕರಾದ ಎಂ ಆರ್ ಪಾಟೀಲ, ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರ, ಪ್ರದೀಪ ಶೆಟ್ಟರ, ಕುಂದಗೋಳ ತಾಲೂಕ ಬಿಜೆಪಿ ಅಧ್ಯಕ್ಷರು, ಅಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕ್ರೀಡಾ ಅಸೋಸಿಯೇಷನ್ ಪದಾಧಿಕಾರಿಗಳು, ಗಣ್ಯರು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa