ಶಿಕ್ಷಣ ರಾಜಕೀಯ ಮುಕ್ತವಾಗಬೇಕು : ಬಸವರಾಜ ಬೊಮ್ಮಾಯಿ
ಬೆಂಗಳೂರು, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಕೆಲಸ ಆಗಬಾರದು. ಶಿಕ್ಷಣ ರಾಜಕೀಯ ಮುಕ್ತವಾಗಬೇಕು ಎಂದು ಮಾಜಿ ಮುಖ್ಯಮ
BSB


ಬೆಂಗಳೂರು, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಕೆಲಸ ಆಗಬಾರದು. ಶಿಕ್ಷಣ ರಾಜಕೀಯ ಮುಕ್ತವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಅವರು ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಸುಶಾಸನ ದಿನಾಚರಣೆ ಅಟಲ್ ಪುರಸ್ಕಾರ 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಟಲ್ ಬಿಹಾರಿ ವಾಜಪೇಯಿ ಅವರು ಆರು ದಶಕಗಳ ಕಾಲ ಪರಿಶುದ್ಧ ರಾಜಕಾರಣ ಮಾಡಿದ್ದರು. ಅವರ ನಡೆ ನುಡಿಯಲ್ಲಿ ವ್ಯತ್ಯಾಸ ಇರಲಿಲ್ಲ. ಅಧಿಕಾರಕ್ಜೆ ಬರುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಸುಮಾರು ನಲವತ್ತೈದು ವರ್ಷ ಹೋರಾಟ ಮಾಡಿಕೊಂಡು ಬಂದಿದ್ದರು. ಅಂತವರ ಕೈಯಲ್ಲಿ ಅಧಿಕಾರ ಬಂದಾಗ ಯಾವರೀತಿ ನಡೆಸುತ್ತಾರೆ ಎಂದು ನಿರೀಕ್ಷೆ ಇತ್ತು. ಜನನಾಯಕನ ಕೈಯಲ್ಲಿ ಅಧಿಕಾರ ಬಂದಾಗ ಹೇಗೆ ನಡೆಸುತ್ತಾರೆ ಎಂದು ವಾಜಪೇಯಿಯವರು ತೋರಿಸಿಕೊಟ್ಟರು ಎಂದು ಹೇಳಿದರು.

ಮಹಾತ್ಮಾ ಗಾಂಧಿ ರಾಮರಾಜ್ಯ ಸ್ವರಾಜ್ಯದ ಕಲ್ಪನೆ ಕೊಟ್ಟು ಹೋಗಿದ್ದಾರೆ. ವಾಜಪೇಯಿ ಅವರು ಈಗ ಬೇಕಾಗಿರುವುದು ಸುರಾಜ್ಯ ಎಂದು ಅವರು ಸುರಾಜ್ಯದ ಕಲ್ಪನೆ ಕೊಟ್ಟರು. ಎರಡನೇಯದ್ದು ಲಾಲ ಬಹಾದ್ದೂರ ಶಾಸ್ತ್ರಿ ಯವರು ಜೈ ಜವಾನ್ ಜೈ ಕಿಸಾನ್ ಅಂದರು. ಸ್ವಾತಂತ್ರ್ಯ ಬಂದ ಮೇಲೆ ದೇಶದ ವಿಭಜನೆ ಮತ್ತೆ ನಮ್ಮ ಮೇಲೆ ಯುದ್ದ ಸಾರಿದ್ದರು‌‌. ಲಾಲ್ ಬಹದ್ದೂರು ಶಾಸ್ತ್ರಿಯವರು ಜೈ ಜವಾನ್ ಜೈಕಿಸಾನ್ ಅಂದರು ಆಗ ಆಹಾರದ ಕೊರತೆ ಇತ್ತು. ಹೀಗಾಗಿ ಸೈನಿಕ ಮತ್ತು ರೈತರ ಅಗತ್ಯ ಇತ್ತು. ಇವತ್ತಿನ ಭಾರತ ಹಿಂದುಳಿಯಬಾರದು ಎಂದು ವಾಜಪೇಯಿ ಅವರು ಜೈ ವಿಜ್ಞಾನ ಎಂದರು. ಅವರ 101 ನೇ ಜಯಂತಿ ಕಾರ್ಯಕ್ರಮ ನಾಡಿರುವುದು ಅತ್ಯಂತ ಸುಸ್ತ್ಯ ಕಾರ್ಯ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande