ಮಾತೃ ಮರಣ ದರವನ್ನು ಶೂನ್ಯಕ್ಕೆ ಇಳಿಸುವ ಗುರಿ : ಗುಂಡೂರಾವ್
ಬೆಂಗಳೂರು, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಮಾನವ ಸಂಪನ್ಮೂಲಗಳ ಮರು ವರ್ಗೀಕರಣ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳೊಂದಿಗೆ ವಿಕಾಸ ಸೌಧದಲ್ಲಿ ಸಭೆ ನಡೆಸಿದರು. ಸಭೆ ಕುರಿತು ಮಾಹಿತಿ ನೀಡಿರುವ ಸಚಿವರು, ಮಾತೃ ಮರಣ ದರವನ್ನು ಶೂನ್ಯಕ್ಕೆ ಇಳಿಸು
Meeting


ಬೆಂಗಳೂರು, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಮಾನವ ಸಂಪನ್ಮೂಲಗಳ ಮರು ವರ್ಗೀಕರಣ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳೊಂದಿಗೆ ವಿಕಾಸ ಸೌಧದಲ್ಲಿ ಸಭೆ ನಡೆಸಿದರು.

ಸಭೆ ಕುರಿತು ಮಾಹಿತಿ ನೀಡಿರುವ ಸಚಿವರು, ಮಾತೃ ಮರಣ ದರವನ್ನು ಶೂನ್ಯಕ್ಕೆ ಇಳಿಸುವ ಮಹತ್ತರವಾದ ಉದ್ದೇಶದ ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹೆರಿಗೆಯಾಗುವ ಮೂಲಕ ಖಾಸಗಿ ಆಸ್ಪತ್ರೆಗಳ ಧನದಾಹಿತನಕ್ಕೆ ಬಡ, ಮಧ್ಯಮವರ್ಗದ ಜನರು ಒಳಗಾಗುವುದನ್ನು ತಪ್ಪಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಡಿಮೆ ಹೆರಿಗೆಯಾಗುವ ಆಸ್ಪತ್ರೆಗಳಿಂದ ಪ್ರಸೂತಿ ವೈದ್ಯರನ್ನು ತಾಲೂಕಿನ ಆಸ್ಪತ್ರೆಗಳಿಗೆ, ತಾಯಿ-ಮಕ್ಕಳ ಆಸ್ಪತ್ರೆಗಳಿಗೆ ಮರು ಹೊಂದಾಣಿಕೆ ಮಾಡುವ ಮೂಲಕ ತ್ರಿವಳಿ ತಜ್ಞರನ್ನು ದಿನದ 24x7 ಸೇವೆಗೆ ಲಭ್ಯವಾಗುವಂತೆ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande